newsics.com
ಮಂಗಳೂರು: ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನಡೆಸುವ ಪರೀಕ್ಷೆ ಎ 29ರಂದು ನಡೆಯಲಿದೆ. ಇದೀಗ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಿದ ಬೆನ್ನಲ್ಲೇ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು
ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ , ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.
ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.