Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > State Digital Media Conference ಬೆಂಗಳೂರಲ್ಲಿ ಶೀಘ್ರದಲ್ಲೇ ರಾಜ್ಯ ಡಿಜಿಟಲ್ ಮಾಧ್ಯಮ ಸಮ್ಮೇಳನ
ಕರ್ನಾಟಕಪ್ರಮುಖ

State Digital Media Conference ಬೆಂಗಳೂರಲ್ಲಿ ಶೀಘ್ರದಲ್ಲೇ ರಾಜ್ಯ ಡಿಜಿಟಲ್ ಮಾಧ್ಯಮ ಸಮ್ಮೇಳನ

Share
2 Min Read
SHARE

newsics.com

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯ ಸರ್ಕಾರ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿ ತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ಡಿಜಿಟಲ್ ಮಾಧ್ಯಮ ಸಮ್ಮೇಳನ ಹಮ್ಮಿಕೊಂಡು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ.

ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಡಿಜಿಟಲ್ ಮಾಧ್ಯಮ ನೀತಿಯಿಂದಾಗಿ ಬೇರೆ ಪತ್ರಿಕೆ, ಟಿವಿಯಂತೆ ಡಿಜಿಟಲ್ ಮಾಧ್ಯಮವು ಪತ್ರಿಕೋದ್ಯಮದ ಭಾಗವೆಂದು ಅಧಿಕೃತವಾಗಿದೆ. ದೇಶದಲ್ಲಿ ಡಿಜಿಟಲ್ ಪಾಲಿಸಿ ಕೆಲವು ರಾಜ್ಯಗಳಲ್ಲಿ ಇದೆಯಾದರೂ ನಮ್ಮ ರಾಜ್ಯದಲ್ಲಿ ಈ ನೀತಿ ಸಮಗ್ರವಾಗಿದ್ದು, ವೃತ್ತಿಪರವಾಗಿ ರಚನೆಯಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ರಾಜ್ಯದಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರುವಲ್ಲಿ ಮಹತ್ವದ ಕಾರ್ಯ ನಿರ್ವಹಿಸಿದ್ದಾರೆ. ಡಿಜಿಟಲ್ ಮಾಧ್ಯಮವು ಪರ್ಯಾಯ ಮಾಧ್ಯಮವಾಗಿ ನೈಜ ಪತ್ರಿಕೋದ್ಯಮ, ನಿಷ್ಪಕ್ಷಪಾತವಾಗಿ, ಮಾನವತೆಯಿಂದಾಗಿ ಪರ್ಯಾಯ ಪತ್ರಿಕೋದ್ಯಮವು ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಹೇಳಿದರು.

ಸನ್ಮಾನಿತರಾಗಿ ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ರಾಜ್ಯದಲ್ಲಿ ಡಿಜಿಟಲ್ ನೀತಿ ತರುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಡಿಜಿಟಲ್ ಮಾಧ್ಯಮದ ಅಗತ್ಯತೆ ಬಗ್ಗೆ ತಿಳಿ ಹೇಳಿ ಆ ಬಗ್ಗೆ ಚರ್ಚೆ ನಡೆಸಿದ್ದೆ. ಸಣ್ಣ ಪತ್ರಿಕೆಯಂತೆ ಡಿಜಿಟಲ್ ಮಾಧ್ಯಮವನ್ನು ಕೈಹಿಡಿಯುವ ಬಗ್ಗೆ ಮುಖ್ಯಮಂತ್ರಿ ಅವರ ಜತೆ ಮಾತನಾಡಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳಿಗೂ ಜಾಹೀರಾತು ನೀಡಲು ಹಣಕಾಸು ವೆಚ್ಚ, ಡಿಜಿಟಲ್ ಮೀಡಿಯಾ ನೀತಿಯ ನೀಲನಕ್ಷೆ ಬಗ್ಗೆಯೂ ತಿಳಿಸಿದೆ. ಇದಕ್ಕೆ ಸಿಎಂ ಸಹಮತ ವ್ಯಕ್ತಪಡಿಸಿದರು. ಹೀಗಾಗಿ ಡಿಜಿಟಲ್ ಜಾಹೀರಾತು ನೀತಿ ತರಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದೆ ಬದಲಾವಣೆ ಮಾಡಲಾಗುವುದು ಎಂದರು.

ಮಾಧ್ಯಮ ಮಾನ್ಯತೆಯಿರುವವರಿಗೆ ಆರೋಗ್ಯ ಸಂಜೀವಿನಿಯಡಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಐಡಿ ಕಾರ್ಡ್ ಅಥವಾ ಮಾನ್ಯತಾ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಜಂಟಿ ಕಾರ್ಯದರ್ಶಿ ಮಾಲತೇಶ್ ಅರಸ್ ಹರ್ತಿಕೋಟೆ ಮಾತನಾಡಿದರು.

ಕೆಎಸ್ ಡಿಎಂಎಫ್ ಉಪಾಧ್ಯಕ್ಷ ಸುನಿಲ್ ಶಿರಸಿಂಗಿ, ಕಾರ್ಯದರ್ಶಿ ಕೆ.ಎಂ. ಶಿವಕುಮಾರ್, ಖಜಾಂಚಿ ಸನತ್ ಕುಮಾರ್ ರೈ, ಜಂಟಿ ಕಾರ್ಯದರ್ಶಿ ರಜನಿ, ವಿಜಯ್ ಭರಮಸಾಗರ ಮತ್ತಿತರರಿದ್ದರು.

ಎಟಿಎಂ ಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕುಗಳಿಗೆ ಆರ್‌ಬಿಐ ಸೂಚನೆ

Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ

Modi Meeting ಟೈಮ್, ಪ್ಲೇಸ್ ಎಲ್ಲವನ್ನೂ ನೀವೇ ನಿರ್ಧರಿಸಿ – ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ

Hania Aamir: ಪಹಲ್ಗಾಮ್ ದಾಳಿ – ಬಾಲಿವುಡ್ ಸಿನಿಮಾದಿಂದ ಪಾಕ್ ನಟಿ ಔಟ್

TAGGED:#State #Digital #Media #Conference #Bengaluru #kvprabhakar #cmsiddaramaiah #hemanthnimbalkar #karnataka #government #policy #newsics #news
Share This Article
Facebook Twitter Copy Link Print
Previous Article Congress deletes controversial ‘missing’ post. ಬಿಜೆಪಿಯ‌ ಕಟು ವಾಗ್ದಾಳಿ ಬಳಿಕ ವಿವಾದಾತ್ಮಕ ‘ಗಾಯಬ್’ ಪೋಸ್ಟ್ ಅಳಿಸಿದ ಕಾಂಗ್ರೆಸ್
Next Article California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?