newsics.com
ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, 8 ಜನರಿಗೆ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಜ್ಯೋತಿಲಾಲ್ ತುಡು (35) ಎಂದು ಗುರುತಿಸಲಾಗಿದೆ. ವಿಂಡ್ ಫ್ಯಾನ್ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.