newsics.com
ಮಂಗಳೂರು: ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಇತರ ಹಿಂದೂ ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿವೆ.
ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.