newsics.com
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಈ ಬಾರಿ ಒಟ್ಟು 66.14% ನಷ್ಟು ಫಲಿತಾಂಶ ಬಂದಿದೆ.
ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿ ಮೊಟ್ಟ ಮೊದಲ ಬಾರಿಗೆ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ ನೋಡಬೇಕು ಎಂದರೆ ಮಧ್ಯಾಹ್ನ 12.30 ರ ನಂತರ kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು.