newsics.com
ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತ ಸರ್ಕಾರ ಹಲವು ನಿರ್ದಾಕ್ಷಿಣ್ಯ ಕ್ರಮವನ್ನು ತೆಗೆದುಕೊಂಡಿತ್ತು.
ಇದೀಗ ಪಾಕಿಸ್ತಾನದಿಂದ ಎಲ್ಲಾ ಸರಕುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಮದು ಮಾಡಿಕೊಳ್ಳುವುದನ್ನು ಭಾರತ ಆದೇಶಿಸಿದೆ.
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.
ಈ ನಿಟ್ಟಿನಲ್ಲಿ ವಿದೇಶಿ ವ್ಯಾಪಾರ ನೀತಿ (ಎಫ್ಟಿಪಿ) 2023 ರಲ್ಲಿ “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲ ನಿಬಂಧನೆಯನ್ನು ಸೇರಿಸಲಾಗಿದೆ ಎಂದು ಅದು ಮೇ 2 ರ ಅಧಿಸೂಚನೆಯಲ್ಲಿ ತಿಳಿಸಿದೆ.