newsics.com
ಬೆಂಗಳೂರು : ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ನಡೆದಿದೆ.
ಯಂಟಾಗನಹಳ್ಳಿ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಶ್ರೀನಿವಾಸ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರು ಶಾಂತಿನಗರ ಗ್ರಾಮದ ನಿವಾಸಿಗಳು . ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.