newsics.com
ಕಲಬುರ್ಗಿ : ನೀಟ್ ಪರೀಕ್ಷೆಯಲ್ಲೂ ಕೂಡ ಅಧಿಕಾರಿಗಳು ಜನಿವಾರ ತೆಗೆಸಿರುವ ಘಟನೆ ಕಲ್ಬುರ್ಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ಕಳೆದ ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆಯ ವೇಳೆ ರಾಜ್ಯದ ಬೀದರ್, ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು.
ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ವಿದ್ಯಾರ್ಥಿಯ ಬಳಿಯಿಂದ ಜನಿವಾರ ತೆಗೆಸಿದ್ದಾರೆ. ವಿದ್ಯಾರ್ಥಿಯಾದ ಶ್ರೀಪಾದ್ ಪಾಟೀಲ್ ಎನ್ನುವ ನಿಂದ ಅಧಿಕಾರಿಗಳು ಜನಿವಾರ ತೆಗೆಸಿದ್ದಾರೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಒಂದು ನಡೆಗೆ ಇದೀಗ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.