newsics.com
ಮಂಗಳೂರು: ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಫಾಝಿಲ್ ಹತ್ಯೆಯನ್ನು ಅರಗಿಸಿಕೊಳ್ಳಲಾಗದ ಪ್ರಭಾವಿ ಮುಸ್ಲಿಮರು ಫಾಝಿಲ್ ಸಹೋದರನ ಕೈ ಬಲಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಪೊಲೀಸರು ಇದೀಗ ಹಲವು ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಜಿಲ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಆ ಕೊಲೆಯಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿ. ಇದೇ ವೈಷಮ್ಯದಿಂದ ಫಾಜಿಲ್ ಸಹೋದರನೇ ಸುಹಾಸ್ ಕೊಲೆಗೆ ಸ್ಕೆಚ್ ಹಾಕಿದ್ದ.
ಸುಹಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಪ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಎಂಬವರು ಬಂಧಿತರು. ಫಾಜಿಲ್ ತಮ್ಮ ಆದಿಲ್ ಕೊಲೆಗೆ ಸಂಚು ರೂಪಿಸಿದ್ದಲ್ಲದೆ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ಆರೋಪಿಗಳಲ್ಲಿ ಒಬ್ಬರಾದ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಹೀಗಾಗಿ ಆತನೂ ಈ ಕೊಲೆಯಲ್ಲಿ ಕೈ ಜೋಡಿಸಿದ್ದ ಎಂದು ತಿಳಿದುಬಂದಿದೆ
ಎಲ್ಲಾ ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ಪಡೆದಿರುವ ತನಿಖಾಧಿಕಾರಿಗೆ ಲಕ್ಷ ಲಕ್ಷ ಫಂಡಿಂಗ್ ಆಗಿರುವ ಬಗ್ಗೆ ಸಾಕಷ್ಟು ಮಾಹಿತಿ ಸಿಕ್ಕಿದೆ.