newsics.com
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಸ್ಥಾನಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯಲ್ಲಿ, ರಾಹುಲ್ ಗಾಂಧಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ದ್ವಿಪೌರತ್ವವನ್ನು ಹೊಂದಿದ್ದಾರೆ, ಇದು ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವರನ್ನು ಅನರ್ಹಗೊಳಿಸುತ್ತದೆ ಎಂದು ಆರೋಪಿಸಲಾಗಿದೆ.
ವಿಚಾರಣೆ ವೇಳೆ ನ್ಯಾಯಾಲಯವು ಕೇಂದ್ರ ಸರ್ಕಾರದಿಂದ ವರದಿ ಸಲ್ಲಿಕೆ ಮಾಡದ ಕಾರಣ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿ, ಯಾವುದೇ ಕಾನೂನುಬದ್ಧ ಆಧಾರಗಳಿಲ್ಲ ಎಂದು ಹೇಳಿದೆ. ಮೊದಲ ವಿಚಾರಣೆಯಲ್ಲಿ ಗೃಹ ಸಚಿವಾಲಯದ ವರದಿಯಿಂದ ನ್ಯಾಯಾಲಯವು ಅಸಮಾಧಾನಗೊಂಡು, 10 ದಿನಗಳಲ್ಲಿ ಪರಿಷ್ಕೃತ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿತ್ತು.