newsics.com
ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ಯಾನ್-ಇಂಡಿಯಾ ತಾರೆಯಾಗಿದ್ದಾರೆ. ನ್ಯಾಷನಲ್ ಕ್ರಶ್ ಎಂದೇ ಫ್ಯಾನ್ಸ್‌ನಿಂದ ಕರೆಸಿಕೊಳ್ಳುವ ರಶ್ಮಿಕಾ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು.ಸತತ ಸೂಪರ್ ಹಿಟ್ ಸಿನಿಮಾ ನೀಡಿದ ಹೆಗ್ಗಳಿಕೆಗೆ,ಪ್ರತಿ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಶ್ಮಿಕಾ ಮಂದಣ್ಣ ಅಭಿನಯಿಸಿದ ಸಿನಿಮಾಗಳು ಸೂಪರ್ ಹಿಟ್ ಆಗಿವೆ.
ಎಲ್ಲರೂ ಸ್ಟಾರ್ ಹೀರೋಗಳ ಜೊತೆ ನಟಿಸಿದ್ದಾರೆ . ಆದರೆ, ಜೂನಿಯರ್ ಎನ್ಟಿಆರ್ ಜೊತೆ ರಶ್ಮಿಕಾ ಅವರು ಜೊತೆ ಪರದೆ ಹಂಚಿಕೊಂಡಿರಲ್ಲಿಲ್ಲ. ಇದೀಗ ಆ ಆಸೆ ಕೂಡ ಈಡೇರಲಿದೆ.
ರಶ್ಮಿಕಾ ಮಂದಣ್ಣ ಅವರು ಈ ಮೊದಲೇ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೆಲಸ ಮಾಡಿದ್ದಾರೆ.ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುವ ಸಾಧ್ಯತೆ ಹೆಚ್ಚಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮತ್ತು ಜೂನಿಯರ್ ಎನ್ಟಿಆರ್ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈತ್ರಿಗೆ ನೀಡಿದ್ದ ಒಂದು ಕಾಲ್ಶಿಟ್ ಜೂನಿಯರ್ ಎನ್ಟಿಆರ್ ಬಳಿ ಇದೆ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಕೆಲಸ ಶುರುವಾಗಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂದು ಹೇಳಲಾಗುತ್ತಿದೆ.ಹೀಗಾಗಿ, ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ. ಈ ಮೂಲಕ ಇವರ ಜೊತೆ ನಟಿಸಬೇಕು ಎಂಬ ರಶ್ಮಿಕಾ ಕನಸು ಈಡೇರಿದಂತೆ ಆಗಲಿದೆ ಎಂದು ಹೇಳಲಾಗುತ್ತಿದೆ.