newsics.com
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ಬಲವಾಗಿ ಖಂಡಿಸಿದ ಭಾರತ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅನೇಕ ದೊಡ್ಡ ಆಘಾತ ನೀಡಿದೆ.
ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ. ಇದೀಗ ಅಂದಾಜು 24 ಗಂಟೆಗಳ ಕಾಲ ಪಾಕಿಸ್ತಾನಕ್ಕೆ ನೀರು ಬಂದ್ ಮಾಡಿದ್ದ ಭಾರತ ಮಂಗಳವಾರ ಬೆಳಗ್ಗೆ ಯಾವುದೇ ಸೂಚನೆ ನೀಡದೇ ತನ್ನ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್ ನದಿ ನೀರಿನ ಮಟ್ಟದಲ್ಲಿ ವ್ಯಾಪಕ ಏರಿಕೆಯಾಗಿದ್ದು,ಇದು ಪಾಕಿಸ್ತಾನದಲ್ಲಿ ಸಂಭವನೀಯ ಪ್ರವಾಹದ ಎಚ್ಚರಿಕೆಯನ್ನು ಹೆಚ್ಚಿಸಿತು ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಫ್ಲಡ್ ಅಲರ್ಟ್ ನೀಡಲಾಗಿದೆ.
ಸೋಮವಾರ ಇಡೀ ದಿನ ಪಾಕಿಸ್ತಾನಕ್ಕೆ ಭಾರತ ಒಂದು ಹನಿ ನೀರೂ ಕೂಡ ಬಿಟ್ಟಿರಲಿಲ್ಲ.ಬಾಗ್ಲಿಹಾರ್ ಅಣೆಕಟ್ಟಿನಲ್ಲಿ ಇದ್ದ ನೀರನ್ನು ಭಾರತ ತನ್ನ ಜಲವಿದ್ಯುತ್ ಯೋಜನೆ ಕಡೆಗೆ ವರ್ಗಾಯಿಸಿದ್ದವು. ಇದರಿಂದಾಗಿ ಚೆನಾಬ್ ನದಿ ಸಂಪೂರ್ಣ ಒಣಗಿ ಹೋಗಿತ್ತು. ಜನರು ಕಾಲ್ನಡಿಗೆಯಲ್ಲಿಯೇ ಚೆನಾಬ್ ನದಿಯನ್ನು ದಾಟುತ್ತಿರುವ ವಿಡಿಯೋಗಳು ಕೂಡ ಪ್ರಸಾರವಾಗಿದ್ದವು. ಪಾಕಿಸ್ತಾನ ಕೂಡ ಚೆನಾಬ್ ನದಿ ನೀರು ಬತ್ತಿ ಹೋಗಿದ್ದರ ಬಗ್ಗೆ ಆತಂಕ ವ್ಯಕ್ತಪಡಿಸಿತ್ತು.