newsics.com
ನವದೆಹಲಿ : ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದ ವಾದ – ಪ್ರತಿವಾದವನ್ನು ಆಲಿಸಿರುವ ನ್ಯಾಯಾಲಯ ಇಂದು ತೀರ್ಪನ್ನು ನೀಡಿದೆ.
ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.
2009 ರಲ್ಲಿ ಸಿಬಿಐ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ವೈ.ಎಸ್. ರಾಜಶೇಖರ ರೆಡ್ಡಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು.