newsics.com
ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತಗಳಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಕಲ್ಪಿಸುವ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್ಟಿಎಚ್) ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ
ದೇಶದ ಯಾವುದೇ ಭಾಗದಲ್ಲಿ ಅಪಘಾತದಲ್ಲಿ ಗಾಯಗೊಂಡವರು ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಸರ್ಕಾರಿ ಮತ್ತು ಸರ್ಕಾರ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಸಕಾಲಕ್ಕೆ ಚಿಕಿತ್ಸೆ ಸಿಗದೇ ದೇಶಾದ್ಯಂತ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.