newsics.com
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ವೇಳೆ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಭಾರತ ಸರ್ಕಾರ ಬುಧವಾರ (ಮೇ 7) ನಸುಕಿನ ವೇಳೆ ತಕ್ಕ ಪ್ರತ್ಯುತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನಿಗಾದಲ್ಲೇ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದ ನಿಶ್ಚಿತ 9 ಉಗ್ರ ನೆಲೆ (ಉಗ್ರ ತಾಣ)ಗಳ ಮೇಲೆ ಭಾರತ ದಾಳಿ ನಡೆಸಿದೆ.
ಆಪರೇಷನ್ ಸಿಂಧೂರ್’ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು.
‘ ಪಾಕಿಸ್ತಾನದಲ್ಲಿ ಭಾರತ ನಡೆಸಿದ ದಾಳಿಯನ್ನು ಎಲ್ಲರೂ ಶ್ಲಾಘಿಸಿದರು. ಇದು ನಮ್ಮೆಲ್ಲರಿಗೂ ಹೆಮ್ಮೆಯ ದಿನ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
26 ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದನೆಯ ವಿರುದ್ಧದ ಕ್ರಮದ ಗುರಿಗಳು, ವಿಧಾನ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ಈ ಹಿಂದೆ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಿದ್ದರು.
.