newsics.com
ನವದೆಹಲಿ; ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಈ ಕುರಿತು ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಫ್, ಪಾಕಿಸ್ತಾನ ನೆಲದಲ್ಲಿ ಭಾರತೀಯ ಸೇನೆಯ ದಾಳಿಯನ್ನು “ಯುದ್ಧದ ಕೃತ್ಯ” ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ.
ಭಾರತವು ಪಾಕಿಸ್ತಾನದ ಮೇಲೆ ದಾಳಿ ಮಾಡಿದೆ. ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಹಕ್ಕು ಪಾಕಿಸ್ತಾನಕ್ಕೆ ಇದೆ. ನಾವು ಖಂಡಿತವಾಗಿಯೂ ಇದಕ್ಕೆ ಬಲವಾದ ಪ್ರತಿಕ್ರಿಯೆ ನೀಡುತ್ತೇವೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಪೋಸ್ಟ್ ಹಾಕಿದ್ದಾರೆ.