newsics.com
ರಾತ್ರೋರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ಮಾಡಲಾಗಿದೆ.
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸಕ್ಕೆ ಭಾರತೀಯ ಸೇನೆ ತೆಗೆದುಕೊಂಡಿದ್ದು ಕೇವಲ 23 ನಿಮಿಷ. ಜಸ್ಟ್ 23 ನಿಮಿಷಗಳಲ್ಲೇ ಆಪರೇಷನ್ ಸಿಂಧೂರಕ್ಕೆ ಉಗ್ರರ 9 ನೆಲೆ ನಾಮಾವಶೇಷವಾಗಿವೆ.ಭಾರತೀಯ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನ ಟಾರ್ಗೆಟ್ ಮಾಡಿ ಹೊಡೆದುರುಳಿಸಿದೆ. ಇದರ ಬೆನ್ನಲ್ಲೆ, ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆದೇಶ ನೀಡಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.