newsics.com
ಭಾರತದ “ಆಪರೇಷನ್ ಸಿಂಧೂರ” ಸೇನಾ ಕಾರ್ಯಾಚರಣೆ ಪಾಕಿಸ್ತಾನದ ನಿದ್ದೆಗಡೆಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ಶಿಬಿರಗಳ ಮೇಲೆ ಭಾರತವು ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಸರಣಿ ನಿಖರ ದಾಳಿಗಳನ್ನು ಪ್ರಾರಂಭಿಸಿತು.
ಪಾಕಿಸ್ತಾನದ ಪ್ರಧಾನಿ ಶೆಷಬಾಜ್ ಷರೀಫ್ ಭಾರತದ ಆಪರೇಷನ್ ಸಿಂಧೂರದ ಬೆನ್ನಲ್ಲಿಯೇ ನ್ಯಾಷನಲ್ ಸೆಕ್ಯುರಿಟಿ ಏಜೆನ್ಸಿ ಸಭೆ ಕರೆದಿದ್ದಾರೆ.ಭಾರತದ ದಾಳಿಯ ನಂತರ ಪಾಕಿಸ್ತಾನ ಸರ್ಕಾರವು ಮಿಲಿಟರಿಗೆ “ಅನುಗುಣವಾದ ಕ್ರಮಗಳನ್ನು ಕೈಗೊಳ್ಳಲು” ಅಧಿಕಾರ ನೀಡಿದ್ದಾಗಿ ವರದಿಯಾಗಿದೆ
ಭಾರತದ ವಿರುದ್ಧ ಪ್ರತೀಕಾರದ ದಾಳಿಗಾಗಿ ಸೇನೆಗೆ ಸಂಪೂರ್ಣ ಅಧಿಕಾರ ನೀಡಿ, ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಆದೇಶ ಹೊರಡಿಸಿದ್ದಾರೆ ರೆ. ಪಾಕ್ ಪ್ರಧಾನಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ, ಭಾರತದ ವಿರುದ್ಧದ ಕಾರ್ಯಾಚರಣೆಗೆ ಸೇನೆಗೆ ಸಂಪೂರ್ಣ ಅಧಿಕಾರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.
ಭಾರತವು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ ಸರ್ಕಾರ, “ಆತ್ಮರಕ್ಷಣೆಗಾಗಿ, ಒಂದು ಸಮಯ, ಸ್ಥಳ ಮತ್ತು ತನ್ನ ಆಯ್ಕೆಯ ವಿಧಾನದಲ್ಲಿ” ಪ್ರತಿಕ್ರಿಯಿಸುವ ಹಕ್ಕನ್ನು ಪಾಕಿಸ್ತಾನ ಕಾಯ್ದಿರಿಸಿದೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಅಧಿಕಾರ ನೀಡಲಾಗಿದೆ ಎಂದು ಅದು ಹೇಳಿದೆ.