newsics.com
ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
38ರ ವಯಸ್ಸಿನ ರೋಹಿತ್ ಶರ್ಮಾ ತಮ್ಮ ಟೆಸ್ಟ್ ವೃತ್ತಿ ಜೀವನದ ಎರಡನೇ ಅವಧಿಯಲ್ಲಿ ಅದ್ಭುತ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದರು. ಅವರು ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಆಡಿದ 67 ಪಂದ್ಯಗಳಿಂದ 4301 ರನ್ಗಳನ್ನು ಗಳಿಸಿದ್ದಾರೆ. ಇದರಲ್ಲಿಅವರು 12 ಶತಕಗಳು ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.
ವಿರಾಟ್ ಕೊಹ್ಲಿ 2022ರ ಆರಂಭದಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡಕ್ಕೆ ನಾಯಕನಾಗಿ ನೇಮಕಗೊಂಡಿದ್ದರು ಹಾಗೂ ಎರಡನೇ ಆ ವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವನ್ನು ಹಿಟ್ಮ್ಯಾನ್ ಮುನ್ನಡೆಸಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಹಲವು ಟೆಸ್ಟ್ ಸರಣಿಗಳನ್ನು ಗೆದ್ದಿದೆ.