newsics.com
ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್ ಉಗ್ರ ದಾಳಿಗೆ ಪ್ರತ್ಯುತ್ತರ ನೀಡಿದೆ. ಈ ದಾಳಿಯಲ್ಲಿ 26 ಜನ ಮೃತಪಟ್ಟಿದ್ದರು. ಭಾರತೀಯ ಸೇನೆ ಮತ್ತು ವಾಯುಪಡೆ ನಡೆಸಿದ ಮಿಡ್ನೈಟ್ ‘ಆಪರೇಷನ್ ಸಿಂಧೂರ್’ಗೆ ಪಾಕಿಸ್ತಾನ ನಿದ್ರೆಯಿಂದ ಬೆಚ್ಚಿಬಿದ್ದಿದೆ.
ಇದಾದ ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ಗೆ ‘ಪಾಕಿಸ್ತಾನಿ ಜೆಕೆ’ ಹೆಸರಿನಲ್ಲಿ ಇಮೇಲ್ ಬಂದಿದ್ದು, ಅದರಲ್ಲಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ (ಜಿಸಿಎ) ಗೆ ಪಾಕಿಸ್ತಾನದವನೆಂದು ಹೇಳಿಕೊಳ್ಳುವ ವ್ಯಕ್ತಿಯಿಂದ ನರೇಂದ್ರ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಇಮೇಲ್ ಬಂದಿದೆ ಎಂದು ವರದಿಯಾಗಿದೆ. ಅಹಮದಾಬಾದ್ ಪೊಲೀಸ್ ಅಧಿಕಾರಿಗಳ ಉನ್ನತ ಗುಂಪು ಮತ್ತು ಬಾಂಬ್ ನಿಷ್ಕ್ರಿಯ ದಳವು ಕ್ರೀಡಾಂಗಣವನ್ನು ಪರಿಶೀಲಿಸಿದೆ.