newsics.com
ಉತ್ತರಕಾಶಿ: ಉತ್ತರಕಾಶಿ ಜಿಲ್ಲೆಯ ಗಂಗನಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.