newsics.com
ನವದೆಹಲಿ: ಭಾರತದ ಮೇಲೆ ಡ್ರೋನ್ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ಭಾರತ ತಕ್ಕ ಉತ್ತರ ನೀಡಿದೆ. ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನ ಸೇರಿದಂತೆ ಒಟ್ಟು ವಿವಿಧ ರಾಜ್ಯಗಳ 26 ಸ್ಥಳಗಳಲ್ಲಿ ಪಾಕಿಸ್ತಾನ ನಿನ್ನೆ ಡ್ರೋನ್ ದಾಳಿ ನಡೆಸಿತ್ತು. ಈ ಮೂಲಕ ಭಾರತದ ತಾಳ್ಮೆ ಪರೀಕ್ಷೆಗೆ ಮತ್ತೊಮ್ಮೆ ಮುಂದಾಗಿತ್ತು. ಇದೀಗ ಭಾರತದ ಏಟಿಗೆ ಪಾಕ್ ತತ್ತರಿಸಿ ಹೋಗಿದೆ.ಪಾಕಿಸ್ತಾನದಲ್ಲಿ ತೀವ್ರ ಇಂಧನ ಕೊರತೆ ಎದುರಾಗಿದ್ದು, ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳ ಕಾಲ ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಆಂತರಿಕ ಸಂಕಷ್ಟವನ್ನು ಇನ್ನಷ್ಟು ತೀವ್ರಗೊಳಿಸಿವೆ.ಇದರ ನಡುವೆಯೂ ಗಡಿಯಲ್ಲಿ ಉದ್ದೇಶಪೂರಿತವಾಗಿ ದಾಳಿಯನ್ನ ಮುಂದುವರೆಸಿದ್ದು, ಶುಕ್ರವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಗಡಿರಾಜ್ಯಗಳಲ್ಲಿ ಬಾಂಬ್ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಲೈನ್ ಆಫ್ ಕಂಟ್ರೋಲ್ (ಎಲ್‌ಒಸಿ) ಬಳಿ ಪಾಕಿಸ್ತಾನವು ದಾಳಿಗಳಿಗೆ ಮುಂದಾಗುತ್ತಿದ್ದು, ಭಾರತೀಯ ಸೇನೆಯು ಸಮರ್ಥವಾಗಿ ಈ ದಾಳಿಗಳನ್ನು ತಡೆದು, ಪ್ರತಿಕಾರ ಕಾರ್ಯಾಚರಣೆಯನ್ನು ನಡೆಸುತ್ತಿದೆ.