newsics.com
ನವದೆಹಲಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತೀವ್ರವಾಗಿದೆ. ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದ್ದು, ಭಾರತೀಯ ಸೇನೆ ತಡೆದು ಪ್ರತಿಕಾರ ಕಾರ್ಯಾಚರಣೆ ನಡೆಸುತ್ತಿದೆ.ಗಡಿಯಲ್ಲಿ ಉದ್ದೇಶಪೂರಿತವಾಗಿ ದಾಳಿಯನ್ನ ಮುಂದುವರೆಸಿದ್ದು, ಶುಕ್ರವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಗಡಿರಾಜ್ಯಗಳಲ್ಲಿ ಬಾಂಬ್ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಲೈನ್ ಆಫ್ ಕಂಟ್ರೋಲ್ (ಎಲ್‌ಒಸಿ) ಬಳಿ ಪಾಕಿಸ್ತಾನವು ದಾಳಿಗಳಿಗೆ ಮುಂದಾಗುತ್ತಿದ್ದು, ಭಾರತೀಯ ಸೇನೆಯು ಸಮರ್ಥವಾಗಿ ಈ ದಾಳಿಗಳನ್ನು ತಡೆದು, ಪ್ರತಿಕಾರ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಇದೀಗ ದೆಹಲಿಯನ್ನು ಗುರಿಯಾಗಿಸಿ ಪಾಕಿಸ್ತಾನ ಫತಾಹ್-II ಉಡಾವಣೆ ಮಾಡಿತ್ತು. ಆದರೆ ಭಾರತ ಈ ಕ್ಷಿಪಣಿಯನ್ನು ಆಕಾಶದಲ್ಲೇ ಛಿದ್ರಗೊಳಿಸಿದೆ. ಹರ್ಯಾಣದ ಸಿರ್ಸಾದಲ್ಲಿ ಭಾರತ ಯಶಸ್ವಿಯಾಗಿ ಧ್ವಂಸಗೊಳಿಸಿದೆ. ಡ್ರೋನ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಈಗ ಭಾರತದ ವಿರುದ್ಧ ಖಂಡಾಂತರ ಕ್ಷಿಪಣಿಯನ್ನು ಪ್ರಾಯೋಗಿಸಿದೆ.
ಪಾಕಿಸ್ತಾನಿ ಅಧಿಕಾರಿಗಳ ಪ್ರಕಾರ, ಫತಾಹ್-II ಕ್ಷಿಪಣಿಯು ಏವಿಯಾನಿಕ್ಸ್ ಉಪಗ್ರಹ ಸಂಚರಣೆ ವ್ಯವಸ್ಥೆಗಳನ್ನು ಹೊಂದಿರುವ ಆಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆ ಎನ್ನಲಾಗಿದೆ. 10 ಮೀಟರ್‌ಗಳಿಗಿಂತ ಕಡಿಮೆ ವೃತ್ತಾಕಾರದ ಸಂಭವನೀಯತೆ (CEP) ಯೊಂದಿಗೆ ನಿಖರವಾದ ಗುರಿಯನ್ನು ಸಕ್ರಿಯಗೊಳಿಸುತ್ತದೆ ಎನ್ನಲಾಗಿದೆ..