newsics.com
ನವದೆಹಲಿ: ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಯನ್ನು ಪಾಕಿಸ್ತಾನ ಮುಂದುವರಿಸಿದೆ. ಇಂದು ಬೆಳಿಗ್ಗೆ ನಡೆದ ಶೆಲ್ ದಾಳಿಯಲ್ಲಿ ರಾಜೌರಿಯ ಹೆಚ್ಚುವರಿ ಉಪ ಆಯುಕ್ತ ರಾಜಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆಪರೇಷನ್ ಸಿಂಧೂರ ಬಳಿಕ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದಿಂದ ನಿರಂತರವಾಗಿ ಫಿರಂಗಿ ಮತ್ತು ಮೋರ್ಟಾರ್ ಶೆಲ್ ದಾಳಿ ಮುಂದುವರೆದಿದೆ. ಶನಿವಾರ ಬೆಳಿಗ್ಗೆ ರಜೌರಿ ಪಟ್ಟಣದಲ್ಲಿರುವ ಐಎಎಸ್ ಅಧಿಕಾರಿ ನಿವಾಸದ ಮೇಲೆ ಫಿರಂಗಿ ಶೆಲ್ ದಾಳಿ ನಡೆದಾಗ ಥಾಪಾ ಮತ್ತು ಅವರ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಶನಿವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ರಾಜೌರಿಯಿಂದ ವಿನಾಶಕಾರಿ ಸುದ್ದಿ. ನಾವು ಜೆ &ಕೆ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ.ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು. ಇಂದು ಬೆಳಗಿನ ಜಾವ ಅಧಿಕಾರಿಯ ನಿವಾಸದ ಮೇಲೆ ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ.ಈ ಭಯಾನಕ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ