Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Mother’s Day 2025: ವಿಶ್ವ ತಾಯಂದಿರ ದಿನ ಏಕೆ ಆಚರಿಸುತ್ತೇವೆ?
ಲೈಫ್‌ಸ್ಟೈಲ್

Mother’s Day 2025: ವಿಶ್ವ ತಾಯಂದಿರ ದಿನ ಏಕೆ ಆಚರಿಸುತ್ತೇವೆ?

Share
2 Min Read
SHARE

newsics.com

ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ಆದರೆ ತಾಯಂದಿರ ದಿನ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ಅವಕಾಶ ನೀಡುತ್ತದೆ. ಹಾಗಾಗಿ ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ.

ತಾಯಿಯ ಪ್ರೀತಿಗೆ ಸರಿಸಾಟಿ ಇಲ್ಲ. ತಾಯಿ ತನ್ನ ಮಕ್ಕಳನ್ನು ಪ್ರೀತಿಸುವಷ್ಟು ಯಾರು ಕೂಡ ಪ್ರೀತಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ಮಕ್ಕಳು ಏನೇ ಮಾಡಿದರೂ ಕಡಿಮೆ. ಆಕೆಯ ಋಣ ತೀರಿಸಲು ಎಂದಿಗೂ ಸಾಧ್ಯವಿಲ್ಲ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ಆದರೆ ತಾಯಂದಿರ ದಿನ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ಅವಕಾಶ ನೀಡುತ್ತದೆ. ಹಾಗಾಗಿ ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ

ದೇವರು ಎಲ್ಲೆಡೆ ಇರಲು ಸಾಧ್ಯವಿಲ್ಲ. ಅದಕ್ಕಾಗಿಯೇ ಆತ ತಾಯಂದಿರನ್ನು ಸೃಷ್ಟಿಸಿದ. ಯಾವುದೇ ಫಲಾಪೇಕ್ಷೆ ಇಲ್ಲದೆ ಅಮ್ಮ ಮಕ್ಕಳಿಗಾಗಿ, ತನ್ನ ಕುಟುಂಬಕ್ಕಾಗಿ, ಮನೆಗಾಗಿ ಸದಾ ದುಡಿಯುತ್ತಿರುತ್ತಾರೆ. ತನ್ನ ಈ ಕೆಲಸದಿಂದ ಇವರು ಯಾವತ್ತೂ ಹಿಂದೆ ಸರಿದವರೇ ಅಲ್ಲ. ತನ್ನ ಬಗ್ಗೆ ಕಿಂಚಿತ್ತೂ ಯೋಚಿಸದೆ ತನ್ನವರಿಗಾಗಿ ಸದಾ ಶ್ರಮ ಪಡುವ ಮಮತಾಮಯಿ ಅಮ್ಮ.

ಪ್ರತಿವರ್ಷ ವಿಶ್ವ ತಾಯಂದಿರ ದಿನವನ್ನು ಮೇ ತಿಂಗಳ ಎರಡನೇ ಭಾನುವಾರದಂದು ಆಚರಿಸಲಾಗುತ್ತದೆ. ಈ ಬಾರಿ ಮೇ 11 ರಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುವುದು.

ತಾಯಂದಿರ ದಿನ 1908ರಲ್ಲಿ ಅಮೆರಿಕದಲ್ಲಿ ಶುರುವಾಗಿತ್ತು. ಅಮೆರಿಕದ ಶಾಂತಿ ಕಾರ್ಯಕರ್ತೆ ಆಗಿದ್ದ ಅನಾ ಜಾರ್ವಿಸ್ ತನ್ನ ತಾಯಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಅನಾ ಜಾರ್ವಿಸ್ ಮದುವೆ ಆಗಿರಲಿಲ್ಲ. 1905ರಲ್ಲಿ ಅನಾ ತಾಯಿ ಮರಣ ಹೊಂದಿದ್ದರು. ತನ್ನ ತಾಯಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲು ಅನಾ ಈ ದಿನ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ಈ ದಿನವನ್ನು ತಾಯಂದಿರ ದಿನವಾಗಿ ಆಚರಿಸಲು ಶುರು ಮಾಡಿದ್ದರು.

ತಾಯಂದಿರ ದಿನವನ್ನು ಎಂದಿನಿಂದ ಆಚರಿಸಲಾಗುತ್ತಿದೆ? ಇದರ ಇತಿಹಾಸವೇನು? ಈ ಬಗ್ಗೆ ಹಲವಾರು ಮಂದಿ ರೀತಿಯ ಅಭಿಪ್ರಾಯ ಹೊಂದಿದ್ದಾರೆ. ಕೆಲವರ ಪ್ರಕಾರ ಆರಂಭದಲ್ಲಿ ಪ್ರಾಚೀನ ಗ್ರೀಕರು ಮತ್ತು ರೋಮನ್ನರು ಈ ವಿಶೇಷ ದಿನವನ್ನು ಆಚರಿಸುತ್ತಿದ್ದರು. ಅವರು ಮಾತೃ ದೇವತೆಗಳಾದ ರಿಯಾ ಮತ್ತು ಸೈಬೆಲೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದರು.

ತಾಯಿಗಾಗಿ ಪ್ರೀತಿ ಹಾಗೂ ಉಡುಗೊರೆ ನೀಡಲು ಯಾವುದೇ ವಿಶೇಷ ದಿನದ ಅಗತ್ಯ ಇಲ್ಲ. ಆದರೂ ಸಹ ತಾಯಂದಿರ ದಿನದಂದು ತಾಯಿಗೆ ಮತ್ತಷ್ಟು ಗೌರವ ನೀಡಲಾಗುತ್ತದೆ. ಈ ದಿನದಂದು ತಾಯಿಗೆ ಸಿಹಿ ಜೊತೆ ಉಡುಗೊರೆ ನೀಡಲಾಗುತ್ತದೆ.

TAGGED:#mother #day #lifestyle #celebration #wish
Share This Article
Facebook Twitter Copy Link Print
Previous Article Gold Rate: ಬಂಗಾರದ ಬೆಲೆಯಲ್ಲಿ ಏರಿಕೆ; ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ
Next Article ಬೆಂಕಿ ಅವಘಡ : 36ಕ್ಕೂ ಅಧಿಕ ಮನೆಗಳು ಸುಟ್ಟು ಕರಕಲು, ಹಲವರು ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?