newsics.com
ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಬಿಸಿಸಿಐ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿಕೊಂಡಿದೆ.
ಹಿರಿಯ ಆಟಗಾರರಾದ ಜಸ್ಪ್ರೀತ್ ಬುಮ್ರಾ ಹಾಗೂ ಕೆ.ಎಲ್.ರಾಹುಲ್ ನಾಯಕತ್ವ ರೇಸ್ನಲ್ಲಿದ್ದಾರೆ. ಆದರೆ ಬುಮ್ರಾ ಪದೇಪದೇಗಾಯಗೊಳ್ಳುತ್ತಿದ್ದಾರೆ. ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು.
ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಜಸ್ಪ್ರೀತ್ ಬುಮ್ರಾ ಸ್ವತಃ ಭಾರತೀಯ ಟೆಸ್ಟ್ ತಂಡದ ನಾಯಕನಾಗಲು ಬಯಸುವುದಿಲ್ಲವಂತೆ. ಸ್ಕೈ ಸ್ಪೋರ್ಟ್ಸ್ ವರದಿಯಲ್ಲಿ ಈ ಹೇಳಿಕೆ ನೀಡಲಾಗಿದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಗಾಯಗಳು ಬುಮ್ರಾ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. 2022-23 ರಲ್ಲಿ, ಅವರು ಗಾಯದಿಂದಾಗಿ ಸುಮಾರು ಒಂದು ವರ್ಷ ಮೈದಾನದಿಂದ ದೂರವಿದ್ದರು. ಜನವರಿಯಲ್ಲಿ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯಗೊಂಡ ನಂತರ ಅವರು ಫಿಟ್ನೆಸ್ ಅನ್ನು ಮರಳಿ ಪಡೆಯಲು ನಾಲ್ಕು ತಿಂಗಳುಗಳನ್ನು ತೆಗೆದುಕೊಂಡರು.