newsics.com
ಬೆಂಗಳೂರು: ಜಾಮೀಟ್ರಿ ಪಬ್ ನಲ್ಲಿ ಅನುಮಾನಸ್ಪದ ವ್ಯಕ್ತಿ ಎಂಟ್ರಿ ಕೊಟ್ಟಿದ್ದಾನೆ. ಅದರಲ್ಲೂ ಕೈಯಲ್ಲಿ ಪಿಸ್ತೂಲ್ ಹಿಡಿದು ಪಬ್ ನಲ್ಲಿ ಎಂಟ್ರಿಕೊಟ್ಟಿದ್ದು, ಪಿಸ್ತೂಲ್ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕಿದೆ.
ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪಬ್ನಲ್ಲಿ ಆತ ಅವಿತುಕೊಂಡಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಆಗಮಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.