Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ
ಕರ್ನಾಟಕಪ್ರಮುಖ

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

Share
2 Min Read
SHARE

newsics.com
ಬೆಂಗಳೂರು: ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಭಾಗದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮನೆ, ತೋಟಗಳಿಗೆ ನೀರು ನುಗ್ಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಈ ಪ್ರದೇಶಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಸಂಬಂಧಿ ಅವಘಡಗಳಲ್ಲಿ ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡ ಎಂಬಲ್ಲಿ ಗುಡ್ಡ ಕುಸಿದು ಹಳ್ಳಿ ಬೇರು ನಿವಾಸಿ ಅಂಬಾ(55) ಎಂಬಾಕೆ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಗದ್ದೆಗೆ ಹೋಗುತ್ತಿದ್ದ ಮಹಿಳೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ನದಿಗೆ ಮೀನು ಹಿಡಿಯಲು ಹೋದ ಮೈಕಲ್ ಎಂಬುವರು ನೀರು ಪಾಲಾಗಿದ್ದಾರೆ

.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ(ಜುಲೈ 4) 167 ಮಿಮೀ ಮಳೆ ಆಗಿದ್ದು, ನದಿಗಳೆಲ್ಲಾ ಭೋರ್ಗರೆಯುತ್ತಿವೆ. ಗಂಗಾವಳಿ ನದಿ ಅಬ್ಬರಕ್ಕೆ ಅಂಕೋಲ ತಾಲೂಕಿನ ಬಿಳೆಹೊಂಗಿ, ಮಂಜುಗುಣಿ, ಪಣಸಗೊಳಿ, ಹೊನ್ನೆಬೈಲು ಸೇರಿ 5ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಸುರಿದ ವರ್ಷಧಾರೆಗೆ 92 ಮನೆಗಳಿಗೆ ಹಾನಿಯಾಗಿದ್ದು ಓರ್ವ ಮಹಿಳೆ ಮತ್ತು ಜಾನುವಾರು ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ. ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಮುಂಜಾಗ್ರತಾ ಕ್ರಮವಾಗಿ 35 ಸಿಬ್ಬಂದಿಯ ಎರಡು ಎನ್ಡಿಆರ್‌ಎಫ್ ತಂಡವನ್ನು ರವಾನಿಸಲಾಗಿದೆ. ಈ ತಂಡ ಕಾರವಾರ, ಕುಮಟಾ, ಅಂಕೋಲಾಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿದೆ.
ಉಡುಪಿಯ ರಟ್ಟಾಡಿಯಲ್ಲಿ ಭಾರಿ ಸುಂಟರಗಾಳಿ ಬೀಸಿ 40ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಸುಂಟರಗಾಳಿ ಹೊಡೆತಕ್ಕೆ 5 ಸಾವಿರಕ್ಕೂ ಅಧಿಕ ಅಡಕೆ ಮರಗಳು, 2 ಸಾವಿರ ರಬ್ಬರ್ ಮರಗಳು ನಾಶವಾಗಿವೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವರ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಾಗ ಕುಟುಂಬದವರು ಹೊರಗೆ ಓಡಿ ಬಂದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಇಂದಿನ 05-07-2024 ರಾಶಿ‌ ಭವಿಷ್ಯ: ಮಿಥುನ- ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮಕರ- ಉದ್ಯೋಗದಲ್ಲಿ ಕಿರಿಕಿರಿ, ನಿಮ್ಮ ಭವಿಷ್ಯದಲ್ಲೇನಿದೆ?

ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ

ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ

ಲೆಹೆಂಗಾ ತೊಟ್ಟು ಹಾಟ್ ಲುಕ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

TAGGED:Heavy rains in coastal and malnad areas: Three deadlife disrupted
Share This Article
Facebook Twitter Copy Link Print
Previous Article ಪತಿಯ ಕಿರುಕುಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಿಳೆ!
Next Article ಹಾಸನದಲ್ಲಿ ಮಾರಕ ಡೆಂಗ್ಯೂ ಜ್ವರ ಆರ್ಭಟ: ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?