Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Miss World pageant controversy ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆಸಿದ ಸರ್ಕಾರ! ವಿಡಿಯೋ ನೋಡಿ
ದೇಶಪ್ರಮುಖವಿದೇಶ

Miss World pageant controversy ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆಸಿದ ಸರ್ಕಾರ! ವಿಡಿಯೋ ನೋಡಿ

Share
1 Min Read
SHARE

newsics.com

ಹೈದರಾಬಾದ್: ತೆಲಂಗಾಣ ಸರ್ಕಾರ ಯಾರನ್ನೋ ಮೆಚ್ಚಿಸಲು ಹೋಗಿ ಜನಾಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ. ತೆಲಂಗಾಣದ ಮಹಿಳೆಯರಿಂದ ವಿದೇಶಿ ಮಹಿಳೆಯರ ಕಾಲು ತೊಳೆಸಲಾಗಿದೆ!.

ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಇದನ್ನು ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಗುಲಾಮಗಿರಿ ಮತ್ತು ಜನಾಂಗೀಯ ಭೇದದಂತೆ ಕಾಣುತ್ತಿದೆ ಎಂದು ಜನರು ಟೀಕೆ ಮಾಡುತ್ತಿದ್ದಾರೆ.

ವಿಶ್ವ ಸುಂದರಿ (Miss World) ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಹೈದರಾಬಾದ್‌ಗೆ ಬಂದಿದ್ದಾರೆ. ಇಲ್ಲಿನ ದೇವಸ್ಥಾನಗಳಿಗೆ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆಸಲಾಗಿದೆ.

ಈ ಬಾರಿ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಯಲಿದೆ. ಈಗಾಗಲೇ ಅದರ ಪ್ರಕ್ರಿಯೆಗಳು ಆರಂಭ ಆಗಿವೆ. ಅದರ ಅಂಗವಾಗಿ ಕೆಲವು ಸ್ಥಳಗಳಿಗೆ ವಿದೇಶಿ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಮೇ 31ರಂದು ಹೈದರಾಬಾದ್ನಲ್ಲಿ ಮಿಸ್ ವರ್ಲ್ಡ್ ಸ್ಪರ್ಧೆಯ ಫಿನಾಲೆ ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈ ನಡುವೆ ವಿವಾದ ಕೂಡ ಶುರುವಾಗಿದೆ.

ನೂರಕ್ಕೂ ಅಧಿಕ ದೇಶಗಳಿಂದ ಬಂದಿರುವ ವಿಶ್ವ ಸುಂದರಿ ಸ್ಪರ್ಧಿಗಳು ತೆಲಂಗಾಣದಲ್ಲಿ ಉಳಿದುಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಮೇ 10ರಿಂದ ವಿಶ್ವ ಸುಂದರಿ ಸ್ಪರ್ಧೆಯ ಪ್ರಕ್ರಿಯೆಗಳು ಆರಂಭವಾಗಿದ್ದು, ಸ್ಪರ್ಧಿಗಳೆಲ್ಲರೂ ರಾಮಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದರ ಉಸ್ತುವಾರಿಯನ್ನು ತೆಲಂಗಾಣ ಸರ್ಕಾರದ ಪ್ರವಾಸೋದ್ಯಮದ ಇಲಾಖೆ ವಹಿಸಿಕೊಂಡಿದೆ. ಸಂಪ್ರದಾಯದ ಪ್ರಕಾರ ಕಾಲು ತೊಳೆದುಕೊಂಡು ದೇವಸ್ಥಾನ ಪ್ರವೇಶ ಮಾಡಬೇಕು. ಆದರೆ ಆ ಸಂಪ್ರದಾಯ ಪಾಲಿಸುವಲ್ಲಿ ಅತಿರೇಕದ ವರ್ತನೆ ತೋರಿಸಲಾಗಿದೆ.

ವಿದೇಶಿ ಮಹಿಳೆಯರನ್ನು ಸಾಲಾಗಿ ಕೂರಿಸಲಾಗಿದೆ. ಅವರ ಕಾಲುಗಳನ್ನು ತೆಲಂಗಾಣದ ಸ್ಥಳೀಯ ಮಹಿಳೆಯರಿಂದ ತೊಳೆಸಲಾಗಿದೆ. ಬಳಿಕ ಕಾಲು ಒರೆಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ನೋಡಿದ ಬಹುತೇಕರು ಕಟುವಾಗಿ ಟೀಕಿಸಿದ್ದಾರೆ. ‘ತೆಲಂಗಾಣ ಸರ್ಕಾರದ ಅಸಹ್ಯ ಕೆಲಸ ಇದು’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ನೂರಾರು ಸ್ಪರ್ಧಿಗಳಲ್ಲಿ ಕೆಲವರು ಯಾರ ಸಹಾಯವನ್ನೂ ಪಡೆಯದೇ ಸ್ವತಃ ಕಾಲು ತೊಳೆದುಕೊಂಡರು. ಆದರೆ ಇನ್ನುಳಿದ ಸ್ಪರ್ಧಿಗಳ ಕಾಲುಗಳನ್ನು ತೆಲಂಗಾಣದ ಮಹಿಳೆಯರು ತೊಳೆದರು. ಇದು ನಾರಿ ಶಕ್ತಿಗೆ ಮಾಡಿದ ಅವಮಾನ ಎಂದು ಟೀಕಿಸಲಾಗುತ್ತಿದೆ.

https://twitter.com/i/status/1922986781475266823

India’s anger over Turkey ಟರ್ಕಿ ಮೇಲೆ ಭಾರತ ಕೆಂಗಣ್ಣು, ಸೆಲೆಬಿ ಭದ್ರತಾ ಅನುಮತಿ ರದ್ದುಗೊಳಿಸಿದ ಕೇಂದ್ರ ಸರ್ಕಾರ

India-Pakistan ceasefire extended ಭಾರತ- ಪಾಕ್ ಕದನ ವಿರಾಮ ಮೇ 18ರವರೆಗೆ ವಿಸ್ತರಣೆ: ಇಶಾಕ್ ದಾರ್ ಸ್ಪಷ್ಟನೆ

Delhi’s red light area ಅಪ್ರಾಪ್ತೆಯರಿಗೆ ಇಂಜೆಕ್ಷನ್… ಕಾಂಡೊಮ್ ಇಲ್ಲದೆ 15-20 ಮಂದಿ ಜತೆ ದೈಹಿಕ ಸಂಪರ್ಕ… ಇದು ದಿಲ್ಲಿ ರೆಡ್ ಲೈಟ್ ಏರಿಯಾ ಹೆಣ್ಮಕ್ಕಳ ವ್ಯಥೆ

TAGGED:Government washes feet of Miss World contestants with local women! Watch video
Share This Article
Facebook Twitter Copy Link Print
Previous Article India’s anger over Turkey ಟರ್ಕಿ ಮೇಲೆ ಭಾರತ ಕೆಂಗಣ್ಣು, ಸೆಲೆಬಿ ಭದ್ರತಾ ಅನುಮತಿ ರದ್ದುಗೊಳಿಸಿದ ಕೇಂದ್ರ ಸರ್ಕಾರ
Next Article newlyweds get this fruit ನವದಂಪತಿ ಈ ಹಣ್ಣು ತಿಂದ್ರೆ ಸಿಗತ್ತೆ ನವಚೈತನ್ಯ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?