Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fraud by car driver ಚಾರ್ಟರ್ಡ್ ಅಕೌಂಟೆಂಟ್‌ನ ಒಂದೂವರೆ ಕೋಟಿ ರೂ. ಕದ್ದು ಹುಂಡಿಗೆ ಹಾಕಿದ ಕಾರು ಚಾಲಕ! ಹಣ ಹಿಂತಿರುಗಿಸಲು ದೇಗುಲ ನಕಾರ
ಕರ್ನಾಟಕಪ್ರಮುಖ

Fraud by car driver ಚಾರ್ಟರ್ಡ್ ಅಕೌಂಟೆಂಟ್‌ನ ಒಂದೂವರೆ ಕೋಟಿ ರೂ. ಕದ್ದು ಹುಂಡಿಗೆ ಹಾಕಿದ ಕಾರು ಚಾಲಕ! ಹಣ ಹಿಂತಿರುಗಿಸಲು ದೇಗುಲ ನಕಾರ

Share
2 Min Read
SHARE

newsics.com

ಬೆಂಗಳೂರು: ಚಾರ್ಟರ್ಡ್ ಅಕೌಂಟೆಂಟ್‌ನ ಚಾಲಕ 1.51 ಕೋಟಿ ರೂ. ಕದ್ದು ದೇವಸ್ಥಾನದ ಹುಂಡಿಗೆ ಹಾಕಿದ್ದಾನೆ.

ಕದ್ದ ಹಣವನ್ನು ದೇವರ ಹುಂಡಿಗೆ ಹಾಕಿದ್ದರಿಂದ ಹಿಂತಿರುಗಿಸಲು ಸಾಧ್ಯವಿಲ್ಲ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಳ್ಳತನ ಆಧ್ಯಾತ್ಮಿಕ ಕಾರಣಕ್ಕಾಗಿ ಗಮನ ಸೆಳೆಯುತ್ತಿದೆ. ದೇವರಿಗೆ ನೀಡಿದ ದೇಣಿಗೆಯನ್ನು ಕದ್ದ ಹಣವಾಗಿದ್ದರೂ ಸಹ ಹಿಂತಿರುಗಿಸಲು ಸಾಧ್ಯವಿಲ್ಲದ ಕಾರಣ ಪ್ರಕರಣ ಇನ್ನಷ್ಟು ಇಂಟ್ರೆಸ್ಟಿಂಗ್‌ ಆಗಿದೆ.

ಮೇ 5 ರಂದು ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಕೋದಂಡರಾಮಪುರದ ನಿವಾಸಿ 46 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರು ತಮ್ಮ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದ ‘ವಿಶ್ವಾಸಾರ್ಹ’ ಚಾಲಕನಿಗೆ 1.51 ಕೋಟಿ ರೂಪಾಯಿಗಳಿದ್ದ ಚೀಲವನ್ನು ಕಾರಿನಲ್ಲಿ ಇಡುವಂತೆ ಹೇಳಿದ್ದರು. ಬಳಿಕ ಬ್ಯಾಂಕಿಗೆ ಹೋಗಲು ಕೆಳಗೆ ಹೋದಾಗ, ರಾಜೇಶ್ ಹಾಗೂ ಕಾರು ಇರಲಿಲ್ಲ.

ಆದರೆ ನನ್ನ ಕಾರು ಅಲ್ಲಿ ನಿಂತಿರುವುದನ್ನು ಕಂಡೆ. ನಾನು ರಾಜೇಶ್‌ಗೆ ಕರೆ ಮಾಡಿದಾಗ, ಅವನು ಅಂಗಡಿಯಲ್ಲಿ ಔಷಧ ಖರೀದಿಸುತ್ತಿರುವುದಾಗಿ ಮತ್ತು 10 ನಿಮಿಷಗಳಲ್ಲಿ ಹಿಂತಿರುಗುವುದಾಗಿ ಹೇಳಿದ್ದ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ. ‘ಆದರೆ, 10 ನಿಮಿಷವಾದರೂ ಆತ ವಾಪಸ್‌ ಬಂದಿರಲಿಲ್ಲ. ನಂತರ ಆತನ ಮೊಬೈಲ್‌ ಕೂಡ ನಾಟ್‌ ರೀಚೆಬಲ್‌ ಆಗಿತ್ತು ಎಂದಿದ್ದಾರೆ.

ಚಾರ್ಟರ್ಡ್ ಅಕೌಂಟೆಂಟ್‌ನಿಂದ ದೂರು ಸ್ವೀಕರಿಸಿದ ನಂತರ, ಪೊಲೀಸರು ರಾಜೇಶ್‌ನನ್ನು ಪತ್ತೆಹಚ್ಚಿ ನೋಟಿಸ್ ಜಾರಿ ಮಾಡಿದರು. ಮೇ 9 ರಂದು ಆತನನ್ನು ವಿಚಾರಣೆಗೆ ಹಾಜರುಪಡಿಸಲಾಯಿತು. ಆತ ಅಪರಾಧವನ್ನು ಒಪ್ಪಿಕೊಂದ ಬಳಿಕ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಡ್ರೈವರ್‌ ಮಾಡಿದ್ದೇನು?
ಪೊಲೀಸ್ ತನಿಖೆಯಲ್ಲಿ ರಾಜೇಶ್ ಈ ಹಣವನ್ನು ಖರ್ಚು ಮಾಡಿದ ರೀತಿ ವಿವರಿಸಿದ್ದಾನೆ. ನನ್ನ ಕುಟುಂಬದ ವಿವಿಧ ಖರೀದಿಗಳಿಗೆ ಸುಮಾರು 1 ಲಕ್ಷ ರೂಪಾಯಿ ಖರ್ಚು ಮಾಡಿದ್ದೇನೆ. ದೇವಸ್ಥಾನದ ಕಾಣಿಕೆ ಹುಂಡಿಗೆ ಒಂದೂವರೆ ಕೋಟಿ ರೂಪಾಯಿಗಳನ್ನು ದಾನ ಮಾಡಿದ್ದೇನೆ ಎಂದಿದ್ದಾನೆ. ದಾನ ಮಾಡಿದ ಹಣವನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಭಾರತದ ದೇವಾಲಯಗಳಲ್ಲಿ ಹುಂಡಿ ಮೂಲಕ ದಾನ ಮಾಡುವ ಹಣವನ್ನು ಸಾಮಾನ್ಯವಾಗಿ ದೇವರಿಗೆ ನೀಡಿದ ಉಡುಗೊರೆ ಎಂದು ಪರಿಗಣಿಸಲಾಗುತ್ತದೆ. ಅದನ್ನು ಸಾಮಾನ್ಯವಾಗಿ ಮರುಪಾವತಿಸಲಾಗುವುದಿಲ್ಲ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಒಬ್ಬ ಭಕ್ತ ಚೆನ್ನೈನ ಪ್ರಸಿದ್ಧ ತಿರುಪೋರೂರ್ ಕಂದಸ್ವಾಮಿ ದೇವಾಲಯದ ‘ಹುಂಡಿ’ಯಲ್ಲಿ ಒಂದು ಲಕ್ಷ ರೂಪಾಯಿ ಮೌಲ್ಯದ ತನ್ನ ದುಬಾರಿ ಐಫೋನ್ ಅನ್ನು ಆಕಸ್ಮಿಕವಾಗಿ ಬೀಳಿಸಿದ್ದ. ಆದರೆ, ದೇವಾಲಯದ ಅಧಿಕಾರಿಗಳು ‘ಹುಂಡಿ’ (ದೇಣಿಗೆ ಪೆಟ್ಟಿಗೆ) ಗೆ ಹಾಕುವ ಎಲ್ಲ ವಸ್ತುವೂ ದೇವಾಲಯದ ಆಸ್ತಿ ಎಂದು ಅವನಿಗೆ ಸ್ಪಷ್ಟವಾಗಿ ಹೇಳಿದ್ದರು.

TAGGED:Car driver steals Rs 1.5 crore from chartered accountant and puts it in temple's treasury! Temple refuses to return money
Share This Article
Facebook Twitter Copy Link Print
Previous Article ರೈತನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು ಶವ ನದಿಗೆಸೆದ ಪತ್ನಿ, ಮಕ್ಕಳು!
Next Article Rain Alert ರಾಜ್ಯದ ಕೆಲವು ಕಡೆ ಮೇ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?