Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇನ್ನಿಲ್ಲ

Share
1 Min Read
SHARE

newsics.com

ಪುತ್ತೂರು(ದಕ್ಷಿಣ ಕನ್ನಡ): ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿಯಾಗಿದ್ದ ಶ್ರೀಧರ ರಾವ್ ಅವರಿಗೆ ಶುಕ್ರವಾರ(ಜು.5) ಬೆಳಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದಾರೆ. ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿರುವ ಶ್ರೀಧರ ರಾವ್‌ರವರು ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು.

1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ ಅವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು.

ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅನ್ನು ದೇವಿ, ಈಶ್ವರ, ಸೀತಾ ಪರಿತ್ಯಾಗದ ಸೀತೆ, ಲಕ್ಷ್ಮಣ, ಸುದರ್ಶನ ವಿಜಯದ ಲಕ್ಷ್ಮಿ, ವಿಷ್ಣು, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ, ದೇವಿ ಮಹಾತ್ಮೆಯ ದೇವಿ ಮೊದಲಾದ ಪಾತ್ರಗಳ ಮೂಲಕ ಪ್ರಸಿದ್ಧಿ ಪಡೆದಿದ್ದರು.

ರಾವ್‌‌ ಅವರ ಅಮ್ಮು ಬಳ್ಳಾಲ್ತಿ, ದಾಕ್ಷಾಯಿಣಿ, ಲಕ್ಷ್ಮಿ ಸುಭದ್ರೆಯ ಪಾತ್ರದ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ಕೊರಗ ಶೆಟ್ರ ಇರಾ ಮೇಳದ ಮೂಲಕ ಯಕ್ಷ ಪಯಣ ಆರಂಭಿಸಿದ್ದ ಶ್ರೀಧರ ರಾವ್‌ ಅವರು ಯಕ್ಷಗಾನ ದಿಗ್ಗಜ ಶೇಣಿಯವರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನವಲ್ಲದೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಇತ್ತೀಚೆಗಷ್ಟೇ ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಜಸ್ಟೀಸ್ ಕೆ.ಜಗನ್ನಾಥ ಶೆಟ್ಟಿ ಸ್ಮಾರಕ ಪ್ರಯುಕ್ತ ಕೊಡಮಾಡುವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

6 ದಿನ ವ್ಯಾಟ್ಸಾಪ್, ಫೇಸ್‌ಬುಕ್ ಸೇರಿ ಎಲ್ಲ ಸೋಶಿಯಲ್ ಮೀಡಿಯಾ ಬ್ಯಾನ್!

‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದರಾಬಾದ್‌ಗೆ ಬಂದ ಜಪಾನ್‌ನ ಪ್ರಭಾಸ್ ಫ್ಯಾನ್ಸ್!

UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್

TAGGED:Renowned Yakshagana artiste Kumble Sridhara Rao is no more
Share This Article
Facebook Twitter Copy Link Print
Previous Article UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್
Next Article ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್‌ಫರ್

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?