newsics.com
ಮೈಸೂರು: ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರೂ ಸಮಾಜ ಸೇವಾ ಮುಖಂಡರೂ ಆಗಿದ್ದ ವಾಮನ ರಾವ್ (71) ಅವರು ಭಾನುವಾರ ಸಂಜೆ ನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತ್ನಿ, ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ. ರಾಷ್ಟೀಯ ಸ್ವಯಂಸೇವಕ ಸಂಘದಲ್ಲಿ ಕಳೆದ 50 ವರ್ಷಗಳಿಂದ ಅಹರ್ನಿಶಿ ಸೇವೆ ಸಲ್ಲಿಸಿದ್ದ ವಾಮನ ರಾವ್ ಅವರು, ಪುತ್ತೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ , ಜಿಲ್ಲಾ ಪ್ರಚಾರಕರಾಗಿ ಮಹತ್ತರವಾದ ಸೇವೆ ಸಲ್ಲಿಸಿದ್ದರು.
ಮೂಲತಃ ಮೈಸೂರಿನವರಾದ ವಾಮನರಾವ್ ಅವರು ಸದ್ಯ ಸಂಘ ಪರಿವಾರದ ಧರ್ಮ ಜಾಗರಣ ಸಂಘಟನೆಯಲ್ಲಿ ಪ್ರಧಾನ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಶಾಸಕ ಟಿ.ಎಸ್. ಶ್ರೀ ವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ ಸೇರಿದಂತೆ ರಾಷ್ಟೀಯ ಸ್ವಯಂಸೇವಕ ಸಂಘದ ಪ್ರಮುಖರು, ಹಿರಿಯ ಕಾರ್ಯಕರ್ತರು ಮೃತರ ಅಂತಿಮ ದರ್ಶನ ಪಡೆದರು.
ಮೃತರ ಅಂತ್ಯಕ್ರಿಯೆ ಭಾನುವಾರ ರಾತ್ರಿ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನೆರವೇರಿತು.