Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುತ್ತಿಗೆದಾರ ಸಂಪತ್ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರ ಬಂಧನ
ಕರ್ನಾಟಕಪ್ರಮುಖ

ಗುತ್ತಿಗೆದಾರ ಸಂಪತ್ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರ ಬಂಧನ

Share
2 Min Read
SHARE

newsics.com

ಮಡಿಕೇರಿ: ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಗುತ್ತಿಗೆದಾರ ಸಂಪತ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಓರ್ವ ಮಹಿಳೆ ಸಹಿತ ಮೂವರನ್ನು ಬಂಧಿಸಿದ್ದಾರೆ.

ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಂ. ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಈ ಕೊಲೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾನು ಪಡೆದಿರುವ ಸಾಲವನ್ನು ಮರುಪಾವತಿಸಿಸುವುದಾಗಿ ನಂಬಿಸಿ, ಆರೋಪಿ ಸಂಗೀತಾ ಮೇ 9ರಂದು ಸಂಪತ್ ನಾಯರ್‌ನನ್ನು ಸೋಮವಾರಪೇಟೆಯ ಹಾನಗಲ್‌ಗೆ ಕರೆಸಿಕೊಂಡು ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಮೂಲಕ ಕೋವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದು, ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ಬಂದಿದ್ದ ಫಿಯೆಟ್ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕಿನ ಒಳಗೂರು ಅರಣ್ಯದಲ್ಲಿ ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ, ಈ ಕೃತ್ಯಕ್ಕೆಂದು ಬೆಂಗಳೂರಿನಿಂದ ತಂದಿದ್ದ ಮತ್ತೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ 16 ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಆಧಾರದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು, ಆರೋಪಿ ಗಣಪತಿಯನ್ನು 17ರಂದು ಬೆಳ್ತಂಗಡಿಯಲ್ಲಿ ಮತ್ತು ಮೇ 18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ಬಂಧಿಸಿರುವುದಾಗಿ ರಾಮರಾಜನ್ ವಿವರಿಸಿದರು.

ಆರೋಪಿಗಳನ್ನು ವಿಚಾರಣೆ ನಡೆದಾಗ ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದು, ಈ ಕೃತ್ಯಕ್ಕೆ ಬಳಸಲಾದ ದೊಣ್ಣೆ, ಕತ್ತಿ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡಾ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಅವರು ಹೇಳಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರೂ ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಕಿರಣನ ಪತ್ನಿ ಸಂಗೀತಾಳ ವಿಡಿಯೋ ಒಂದು ಸಂಪತ್ ಬಳಿ ಇದ್ದು, ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್‌ನೊಂದಿಗೆ ಜೀವನ ನಡೆಸಿ, ನಂತರ ಪುನಃ ತನ್ನ ಮೊದಲ ಪತಿ ಕಿರಣನೊಂದಿಗೆ ಜೀವಿಸುತ್ತಿದ್ದಾಳೆ. ಆಕೆ ಪಡೆದುಕೊಂಡ 20 ಲಕ್ಷ ರೂ. ನೀಡದಿದ್ದಾಗ ಸಂಪತ್ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಕೊಲೆಯಾದ ಸಂಪತ್ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಆಗಮಿಸಿದ್ದಾಗ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪವನ್ನೂ ಎದುರಿಸುತ್ತಿದ್ದ.

Relationship ನೀವು ಅತಿಯಾದ ಲೈಂಗಿಕ ಉತ್ಕಟತೆ ಹೊಂದಿದ್ದೀರಾ? ಹಾಗಾದ್ರೆ ಹುಷಾರು!

VI Services may be shut down ದಿವಾಳಿಯಾಯ್ತಾ ವೊಡಾಫೋನ್- ಐಡಿಯಾ? ಸರ್ಕಾರದ ನೆರವು ಸಿಗದಿದ್ದರೆ ವರ್ಷದೊಳಗೆ ಸೇವೆ ಸ್ಥಗಿತ

actress Khushi Kapoor ಎಲ್ಲ ಸಿನಿಮಾ‌ ಪ್ಲಾಪ್ ಆದ್ರೂ ಈಕೆಗಿಲ್ಲ ಚಿಂತೆ… ಬರೀ ಬಿಕಿನಿ ಫೋಟೋಗಳದೇ ಸಂತೆ…

TAGGED:Contractor Sampath murder case: Three people including a woman arrested
Share This Article
Facebook Twitter Copy Link Print
Previous Article Silent killer High BP ರಾಜ್ಯದಲ್ಲಿ ಹೆಚ್ಚುತ್ತಿದೆ ಹೈ ಬಿಪಿ! ಯಾಕೆ ಹೀಗಾಗ್ತಿದೆ?
Next Article Rain info ಮುಂದಿನ 3 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಗಾಳಿ- ಮಳೆ, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?