newsics.com
ಬೆಂಗಳೂರು: ರಾಜ್ಯದ ರಾಜಧಾನಿ ಕಳೆದ ರಾತ್ರಿ ಸುರಿದ ಮಳೆ ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಗಾಳಿ ಸಹಿತ ಭಾರೀ ಮಳೆಗೆ ವೈಟ್ ಫೀಲ್ಡ್ನ ಚನ್ನಸಂದ್ರದ ಬಳಿ ಘಟನೆ ಕಟ್ಟಡದ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.
35 ವರ್ಷದ ಶಶಿಕಲಾ ಮೃತ ಮಹಿಳೆ ಆಗಿದ್ದಾರೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.