newsics.com
ಬೆಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನ ವೈಟ್ ಫೀಲ್ಡ್ ಭಾಗದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆ ಒಬ್ಬರು ಸಾವನಪ್ಪಿದ್ದರು. ಸೋಮವಾರ ರಾತ್ರಿ ಬೆಂಗಳೂರಲ್ಲಿ ಮಹಾಮಳೆಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಜನರಿಗೆ ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ.
ಮನೋಹರ್ ಕಾಮತ್ (55) ಮತ್ತು ದಿನೇಶ್ (9) ಎನ್ನುವ ಬಾಲಕ ಬಲಿಯಾಗಿದ್ದಾರೆ. ಬಿಟಿಎಂ ಲೇಔಟ್ ನ 2 ನೇ ಹಂತದ ಎನ್ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ.
ಮಧುವನ ಅಪಾರ್ಟ್ಮೆಂಟ್‌ನ ಬೇಸ್ಮೆಂಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ ನಿವಾಸಿ ಮನೋಹರ್ ಕಾಮತ್ ಹಾಗೂ ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.
ಮಳೆಯಿಂದ ಅಪಾರ್ಟ್ಮೆಂಟಿನ ಬೇಸ್ಮೆಂಟ್ ಸಂಪೂರ್ಣವಾಗಿ ಜಲಾವೃತವಾಗಿತ್ತು.
ಈ ವೇಳೆ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್‌ನಿಂದ ಮನೋಹರ್ ಕಾಮತ್ ಮತ್ತು ದಿನೇಶ್ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಸದ್ಯ ಇಬ್ಬರ ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಧುವನ ಅಪಾರ್ಟ್ಮೆಂಟ್‌ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.