newsics.com
ವಿಕಾರಾಬಾದ್ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.