newsics.com
ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಅಂಡರ್-19 ತಂಡವನ್ನು ಪ್ರಕಟಿಸಿದೆ. ಇಬ್ಬರು ಐಪಿಎಲ್ ಸ್ಟಾರ್ಗಳು ತಂಡದಲ್ಲಿ ಸ್ಥಾನ ಪಡೆದಿದ್ದು, 17 ವರ್ಷದ ಆಯುಷ್ ಮ್ಹಾತ್ರೆ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಇವರಲ್ಲದೆ, ಈ ಬಾರಿಯ ಐಪಿಎಲ್‌ನಲ್ಲಿ ಸ್ಫೋಟಕ ಶತಕ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅಂಡರ್-19 ತಂಡವು ಇಂಗ್ಲೆಂಡ್ ಪ್ರವಾಸದಲ್ಲಿ ವಿವಿಧ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಐದು ಯೂಥ್ ಏಕದಿನ ಸೀರೀಸ್ ಕೂಡ ಸೇರಿದೆ. ಜೂನ್ 24 ರಿಂದ ಜುಲೈ 23 ವರೆಗೆ ಪಂದ್ಯಾವಳಿಗಳು ನಡೆಯಲಿವೆ.
ರಾಜಸ್ಥಾನ್ ರಾಯಲ್ಸ್ ಪರ 7 ಮ್ಯಾಚ್ ಆಡಿರುವ ಸೂರ್ಯವಂಶಿ 252 ರನ್ಗಳಿಸಿದ್ದಾರೆ. ಸ್ಪರ್ಧಾತ್ಮಕ ಕ್ರಿಕೆಟ್ ಜಗತ್ತಿನಲ್ಲಿ ಅತಂತ್ಯ ವೇಗವಾಗಿ ಶತಕ ಬಾರಿಸಿದ ಎರಡನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ಸೂರ್ಯವಂಶಿ 35 ಬಾಲ್ನಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ.
ಸಿಎಸ್ಕೆ ಪರ ಆಡಿರುವ ಆಯುಷ್ ಕೂಡ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ಋತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ತಂಡಕ್ಕೆ ಎಂಟ್ರಿ ನೀಡಿದರು. ಸಿಎಸ್ಕೆ ಪರ ಬ್ಯಾಟ್ ಬೀಸಿದ ಮ್ಹಾತ್ರೆ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.