newsics.com
ಯಾದಗಿರಿ : ರಾತ್ರೋರಾತ್ರಿ ಕಾಂಗ್ರೆಸ್ ಕಚೇರಿಗೆ ದುರುಳರು ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಕಿಡಿಗೇಡಿಗಳ ಕೃತ್ಯದಿಂದ ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಯಲ್ಲಿದ್ದ ಸೋಫಾ, ಎಸಿ ಎಲ್ಲವೂ ಸುಟ್ಟು ಭಸ್ಮವಾಗಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಚೇರಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.
ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ನಡೆಸುತ್ತಿದ್ದಾರೆ.
CET RESULT ಸಿಇಟಿ ಫಲಿತಾಂಶ ಪ್ರಕಟ: ಭವೇಶ್ ಜಯಂತಿ, ಅಕ್ಷಯ್ ಹೆಗಡೆ, ಹರೀಶ್ ರಾಜ್‌ಗೆ ಮೊದಲ ಸ್ಥಾನ