Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ
Uncategorized

ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ

Share
1 Min Read
SHARE

newsics.com
ಬೆಂಗಳೂರು: ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ಸಂಖ್ಯೆಯನ್ನು ಗ್ರಾಹಕರ ಆಧಾರ್‌ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳು ಸದ್ದಿಲ್ಲದೆ ಚಾಲನೆ ನೀಡಿವೆ.

ಆದರೆ, ಬಹುತೇಕ ಕಡೆಗಳಲ್ಲಿ ಆಧಾರ್‌-ಆರ್‌.ಆರ್‌. ಸಂಖ್ಯೆಗೆ ಹೊಂದಾಣಿಕೆ ಆಗದಿರುವುದರಿಂದ ಮುಂದಿನ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಬಾಧಿಸುತ್ತಿದೆ.
ವಿವಿಧ ಸಬ್ಸಿಡಿ ಯೋಜನೆಗಳಿಗೆ ಈಗಾಗಲೇ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) 2024-25ನೇ ಸಾಲಿನ ವಿದ್ಯುತ್‌ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸಿದ್ದು, ಈ ಸಂಬಂಧ ಎಸ್ಕಾಂಗಳಿಗೆ ಸೂಚನೆ ನೀಡಿತ್ತು.

10 ಎಚ್‌ಪಿ ಸಾಮರ್ಥ್ಯದವರೆಗಿನ ಪಂಪ್‌ಸೆಟ್‌ ಹೊಂದಿರುವ ರೈತರ ಆಧಾರ್‌ ಸಂಖ್ಯೆ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಆದರೆ ಹೀಗೆ ಸಂಗ್ರಹಿಸಲಾದ ಬಹುತೇಕ ಆರ್‌.ಆರ್‌. ಸಂಖ್ಯೆಗಳಿಗೆ ಮತ್ತು ಆಧಾರ್‌ ಸಂಖ್ಯೆಗೆ ಹೊಂದಾಣಿಕೆ ಆಗುತ್ತಿಲ್ಲ. ಎಷ್ಟೋ ಕಡೆ ಹೆಸರು ಬದಲಾಗಿದೆ. ಮತ್ತೆ ಹಲವು ಕಡೆ ತಪ್ಪಾಗಿ ಮುದ್ರಿತವಾಗಿದೆ.

ಸದ್ಯ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿರುವುದರಿಂದ ತಕ್ಷಣಕ್ಕೆ ತೊಂದರೆಯಾಗದಿರಬಹುದು. ಆದರೆ ಪ್ರಕ್ರಿಯೆ ಮುಗಿದ ನಂತರ ತಾಳೆಯಾಗದ ರೈತರ ಸಬ್ಸಿಡಿಗೆ ಕತ್ತರಿ ಬೀಳಲಿದೆಯೇ ಎಂಬ ಆತಂಕ ಕಾಡತೊಡಗಿದೆ.
ಈ ನಡುವೆ ಮೂಲಗಳ ಪ್ರಕಾರ ಈಗಾಗಲೇ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಬೆಸ್ಕಾಂ) ಸಹಿತ ಎಲ್ಲ ಎಸ್ಕಾಂಗಳು ರೈತರ ಆಧಾರ್‌ ಸಂಖ್ಯೆಯನ್ನು ಸಂಗ್ರಹಿಸಿ, ಆಯಾ ಆರ್‌.ಆರ್‌. ಸಂಖ್ಯೆಯುಳ್ಳ ದತ್ತಾಂಶದೊಂದಿಗೆ ದಾಖಲಿಸಿವೆ. ಆದರೆ ಲಿಂಕ್‌ ಮಾಡಲು ಸಾಧ್ಯವಾಗಿಲ್ಲ. ಇದಕ್ಕೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ಅನುಮತಿ ಕಡ್ಡಾಯ ಎನ್ನಲಾಗಿದೆ. ಈ ಸಂಬಂಧ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಅನುಮತಿ ದೊರೆತಾಕ್ಷಣ ಜೋಡಣೆ ಮಾಡುವ ಕೆಲಸ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

TAGGED:Aadhaar Linking Process to Farm Pumpset Launched: Fears of Missing Subsidy to Farmers
Share This Article
Facebook Twitter Copy Link Print
Previous Article ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲಪಕ್ಷ, ಬಿದಿಗೆ, ಭಾನುವಾರ, 07-07-2024

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?