Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?
ಕರ್ನಾಟಕಪ್ರಮುಖ

Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆ ಸಭೆ ಅಂತ್ಯವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು.
ಕೊವಿಡ್ ಸಹಾಯವಾಣಿ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಬಳಿಕ ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ.

  • ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
  • ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
  • ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
  • ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
  • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.
  • ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.
  • ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.
  • ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
  • ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
  • ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.
  • ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.
  • ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
  • ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು

TAGGED:Holiday for students with coronavirus fever and cold: What was decided at the meeting?
Share This Article
Facebook Twitter Copy Link Print
Previous Article ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು
Next Article Prajwal Revanna ಪ್ರಜ್ವಲ್ ರೇವಣ್ಣ ಕೇಸ್: ಮೊಬೈಲ್ ನಲ್ಲಿ 2 ಸಾವಿರ ಅಶ್ಲೀಲ ಫೋಟೋ, 40 ವಿಡಿಯೋಗಳಿದ್ದವು : ಕಾರು ಚಾಲಕ ಸ್ಪೋಟಕ ಹೇಳಿಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?