Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna ಪ್ರಜ್ವಲ್ ರೇವಣ್ಣ ಕೇಸ್: ಮೊಬೈಲ್ ನಲ್ಲಿ 2 ಸಾವಿರ ಅಶ್ಲೀಲ ಫೋಟೋ, 40 ವಿಡಿಯೋಗಳಿದ್ದವು : ಕಾರು ಚಾಲಕ ಸ್ಪೋಟಕ ಹೇಳಿಕೆ
ಕರ್ನಾಟಕಪ್ರಮುಖ

Prajwal Revanna ಪ್ರಜ್ವಲ್ ರೇವಣ್ಣ ಕೇಸ್: ಮೊಬೈಲ್ ನಲ್ಲಿ 2 ಸಾವಿರ ಅಶ್ಲೀಲ ಫೋಟೋ, 40 ವಿಡಿಯೋಗಳಿದ್ದವು : ಕಾರು ಚಾಲಕ ಸ್ಪೋಟಕ ಹೇಳಿಕೆ

Share
2 Min Read
SHARE

newsics.com

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ.

ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು ಎಂದು ಕಾರ್ತಿಕ್, ಇಂದು (ಮೇ 26) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್ ನಲ್ಲಿದ್ದ ಅಶ್ಲೀಲ ವಿಡಿಯೋಗಳು ಹೇಗೆ ಸಿಕ್ಕವು ಎನ್ನುವ ಬಗ್ಗೆ ಕೋರ್ಟ್ ಮುಂದೆ ಹೇಳಿದ್ದಾರೆ.

ಕೋರ್ಟ್ ಮುಂದೆ ಕಾರ್ತಿಕ್ ನೀಡಿರುವ ಹೇಳಿಕೆ ಇಲ್ಲಿದೆ

2009ರಿಂದ ಹೆಚ್.ಡಿ.ರೇವಣ್ಣ ಬಳಿ ಡ್ರೈವರ್ ಆಗಿದ್ದೆ. ನಂತರ ಭವಾನಿ ರೇವಣ್ಣ, ಸೂರಜ್ ರೇವಣ್ಣ ಕಾರಿಗೂ ಚಾಲಕನಾಗಿದ್ದೆ. 2018ರಿಂದ ಪ್ರಜ್ವಲ್ ರೇವಣ್ಣ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ.ಆ ಸಂದರ್ಭದಲ್ಲಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾಗ ಕಾರಿನಲ್ಲೇ ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು. ನಾನು ಅವರ ಕಡೆ ನೋಡಿದಾಗ ಫೋನ್ ತಿರುಗಿಸಿಕೊಳ್ಳುತ್ತಿದ್ದರು ಎಂದು ಕೊರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದಾರೆ.

ಪ್ರಜ್ವಲ್ ರೇವಣ್ಣ ಮೊಬೈಲ್ ಪಾಸ್ ವರ್ಡ್ ನನಗೆ ತಿಳಿದಿತ್ತು. ಒಂದು ದಿನ ಜಯನಗರದ ಅವರ ಗೆಳತಿ ಮನೆಗೆ ಹೋದಾಗ ಕಾರಿನಲ್ಲಿ ಮೊಬೈಲ್ ಬಿಟ್ಟಿದ್ದರು.ಆಗ ಮೊಬೈಲ್ ತೆಗೆದು ನೋಡಿದಾಗ ಅಶ್ಲೀಲ ಫೋಟೋ, ವಿಡಿಯೋಗಳಿದ್ದವು. 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು. ಭವಾನಿ ರೇವಣ್ಣರಿಗೆ ತೋರಿಸಲೆಂದು ವಿಡಿಯೋಗಳನ್ನು ವರ್ಗಾಯಿಸಿಕೊಂಡೆ. ಮಗನಿಗೆ ಬುದ್ದಿ ಹೇಳಲಿ ಎಂದು ಭವಾನಿ ರೇವಣ್ಣರಿಗೆ ಮಾಹಿತಿ ನೀಡಿದ್ದೆ ಎಂದಿದ್ದಾರೆ.

ಆಗ ಭವಾನಿ ರೇವಣ್ಣ ಅವರು ಫೋಟೋ, ವಿಡಿಯೋ ತಮಗೆ ಕಳುಹಿಸಲು ಕೋರಿದ್ದರು. ಅಲ್ಲದೇ ಬೇರೆಲ್ಲೂ ಈ ವಿಷಯ ಬಹಿರಂಗಪಡಿಸದಂತೆ ಮನವಿ ಮಾಡಿದ್ದರು. ಇದಾದ ಬಳಿಕ ಭವಾನಿ ರೇವಣ್ಣ ಪ್ರಜ್ವಲ್ ಜೊತೆ ಮಾತು ಬಿಟ್ಟಿದ್ದರು. ಹುಟ್ಟುಹಬ್ಬಕ್ಕೆ ಭವಾನಿ ಶುಭ ಕೋರಿದಾಗ ಪ್ರಜ್ವಲ್ ಪ್ರತಿಕ್ರಿಯಿಸಲಿಲ್ಲ. ವಿಡಿಯೋ ಬಗ್ಗೆ ತಿಳಿಸಿದ್ದು ಯಾರೆಂದು ಕೇಳಿದಾಗ ಭವಾನಿ ನನ್ನ ಹೆಸರು ಹೇಳಿದ್ದರು. ಆಗ ಫೋನ್ ಮಾಡಿ ಪ್ರಜ್ವಲ್ ತನಗೆ ಬೈದಿದ್ದಾರೆ ಎಂದು ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಹೇಳಿದ್ದಾರೆ.

ವಿಡಿಯೋ ಬಹಿರಂಗಗೊಂಡಿದ್ಹೇಗೆ?

ನಮ್ಮ ನಡುವೆ ಜಗಳವಾಗಿ 2022ರಲ್ಲಿ ನಾನು ಕೆಲಸ ಬಿಟ್ಟೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೇಸ್ ಕೂಡಾ ಹಾಕಿದ್ದೆ.ಆಸ್ತಿ ವಿವಾದ ಬಗೆಹರಿಸುತ್ತೇನೆ ಕೆಲಸಕ್ಕೆ ಬರುವಂತೆ ಕರೆದಿದ್ದರು. ಆದರೆ ವಿಡಿಯೋ ಬಹಿರಂಗಪಡಿಸದಂತೆ ತಡೆಯಾಜ್ಞೆ ತಂದರು. ನನ್ನನ್ನು ಪ್ರತಿವಾದಿ ಮಾಡಿದ್ದರಿಂದ ವಕೀಲ ದೇವರಾಜೇಗೌಡರನ್ನು ಸಂಪರ್ಕಿಸಿದೆ. ಸಾಕ್ಷಿಯಾಗಿ ಫೋಟೋಗಳನ್ನು ನೀಡುವಂತೆ ಸೂಚಿಸಿದ್ದರಿಂದ ಪೆನ್ ಡ್ರೈವ್ ನಲ್ಲಿ ನೀಡಿದೆ. ಆದ್ರೆ, ಚುನಾವಣೆ ವೇಳೆ ಫೋಟೋ, ವಿಡಿಯೋಗಳು ಬಹಿರಂಗಗೊಂಡವು ಎಂದು ಕಾರ್ತಿಕ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದಿದ್ದಾರೆ.

Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?

TAGGED:40 videos on the mobile: Car driver's explosive statementPrajwal Revanna case: There were 2 thousand obscene photos
Share This Article
Facebook Twitter Copy Link Print
Previous Article Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?
Next Article Rain alerts ಧಾರಾಕಾರ ಮಳೆ : ನಾಳೆ ನಾಡಿದ್ದು ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?