newsics.com
ಮಡಿಕೇರಿ; ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರದಂದು ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಗಾಗಿ ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ, ನಾಡಿದ್ದು ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.