newsics.com
ಬೆಂಗಳೂರು: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್‌ಗಳನ್ನು ವಾಪಾಸ್ ಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ಸರ್ಕಾರದ ಆದೇಶವನ್ನೂ ರದ್ದು ಮಾಡಿದೆ.
ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು.ಇದೀಗಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ
ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ. ಸರ್ಕಾರದ ಆದೇಶ ಕಾನೂನು ಬಾಹಿರ ಎಂದು ರ್ಟ್ ತಿಳಿಸಿದೆ.