Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ
ಪ್ರಮುಖ

Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಮುಸುಕಿನ ಗುದ್ದಾಟ ಶುರುವಾಗಿದೆ. ಅಧಿಕಾರಿಗಳ ವರ್ಗಾವಣೆ ಸಂಬಂಧ ಇಬ್ಬರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶಗೊಂಡಿದ್ದು, ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿದ್ದ ಇಂಜಿನಿಯರ್‌ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳು ಬದಲಾವಣೆಯಾಗಿದ್ದರು. ಸದ್ಯ ಜಲಸಂಪನ್ಮೂಲ ಖಾತೆಯನ್ನು ಹೊಂದಿರುವ ಡಿಕೆ ಶಿವಕುಮಾರ್ ಅವರ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ ಇದು ಡಿಸಿಎಂ ಕೋಪಕ್ಕೆ ಕಾರಣವಾಗಿದೆ.

ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿಕೆ ಶಿವಕುಮಾರ್‌ ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಸಂಪುಟ ಸಹೋದ್ಯೋಗಿಗಳ ನಡುವೆ ಒಂದು ಒಪ್ಪಂದವಾಗಿತ್ತು. ನನ್ನ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಅಥವಾ ನೇಮಕಾತಿಗಳನ್ನು ನನ್ನ ಸ್ಪಷ್ಟ ಅನುಮೋದನೆ ಇಲ್ಲದೆ ಮಾಡಬಾರದು. ಈ ವರ್ಗಾವಣೆಗಳನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರದೆ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ

ಹಲವು ತಿಂಗಳುಗಳುಗಳಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಐವರು ಮುಖ್ಯ ಎಂಜಿನಿಯರ್‌ಗಳು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಐವರು ಎಂಜಿನಿಯರ್‌ಗಳನ್ನು ಖಾಲಿ ಇದ್ದ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್‌ಗಳು ಕರ್ತವ್ಯಕ್ಕೆ ಹಾಜರಾಗಿದ್ದರು.

ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲಾ ಐವರು ಎಂಜಿನಿಯರ್‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.

https://x.com/RAshokaBJP/status/1928009923444756978

TAGGED:#ChiefMinister #Siddaramaiah #DeputyChiefMinister #DKShivakumar #political
Share This Article
Facebook Twitter Copy Link Print
Previous Article Viral ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲೇ ಎಳೆದ ಆನೆ – ವೈರಲ್ ವಿಡಿಯೋ ನೋಡಿ
Next Article Abdul Rahim Case ಮುಸ್ಲಿಂ ಮುಖಂಡರ ಸಭೆಯಲ್ಲಿ ಗದ್ದಲ – ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?