newsics.com
ಮಂಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೇ 30ರಂದು ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಳೆ ಕಾರಣ ಶಾಲೆಗಳು, ಅಂಗನವಾಡಿಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಒಂದರಿಂದ ಹತ್ತನೇ ತರಗತಿಯವರೆಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಆರ್ಭಟ ಮುಂದುವರಿದಿದೆ.