Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > hemavathi express link canal 144 ಸೆಕ್ಷನ್ ಮಧ್ಯೆಯೂ ಭುಗಿಲೆದ್ದ ರೈತರ ಆಕ್ರೋಶ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?
ಕರ್ನಾಟಕಪ್ರಮುಖ

hemavathi express link canal 144 ಸೆಕ್ಷನ್ ಮಧ್ಯೆಯೂ ಭುಗಿಲೆದ್ದ ರೈತರ ಆಕ್ರೋಶ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?

Share
3 Min Read
SHARE

newsics.com

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕೂರಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿಟ್ಟೂರಿನಿಂದ ಪಾದಯಾತ್ರೆ ಮೂಲಕ ಕಾಮಗಾರಿ ನಡೆಯುತ್ತಿರುವ ಸುಂಕಾಪುರದತ್ತ ಸಾವಿರಾರು ರೈತರು, ಹೋರಾಟಗಾರರು ಲಗ್ಗೆಯಿಟ್ಟಿದ್ದಾರೆ. ಗುಬ್ಬಿಯ ಸುಂಕಾಪುರದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ.

ವಿರೋಧದ ನಡುವೆಯೂ ಸರ್ಕಾರ ಕಾಮಗಾರಿ ನಡೆಸಲು ಮುಂದಾಗಿದೆ. ಹೀಗಾಗಿ ಸರ್ಕಾರದ ನಡೆಗೆ ಹೋರಾಟಗಾರರು, ಸ್ವಾಮೀಜಿಗಳು, ರೈತರು ರೊಚ್ಚಿಗೆದ್ದಿದ್ದು, ಗುಬ್ಬಿ ತಾಲೂಕಿನ ಸುಂಕಾಪುರ ಮತ್ತು ಡಿ ರಾಮ್ ಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನ ಮಲ್ಲಸಂದ್ರದ ಕಳ್ಳಿಪಾಳ್ಯದ ರಸ್ತೆ ತಡೆದು ಬಿಜೆಪಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ ಪ್ರತಿಭಟನೆ ಮಾಡಿದ್ದು, ಇದಕ್ಕೆ ಮಠಾಧೀಶರು ಕೂಡ ಸಾಥ್ ಕೊಟ್ಟರು.ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸುಂಕಾಪುರ ನಾಲೆ ಬಳಿಯ ಸುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಆದರೂ ಲೆಕ್ಕಿಸದೇ ರೈತರು ಹಾಗೂ ಬಿಜೆಪಿ ನಾಯಕರು, ಕಾರ್ಯಕರ್ತರು 144 ಸೆಕ್ಷನ್ ವ್ಯಾಪ್ತಿಯ ಒಳಗೆ ಹಾಗೂ ಹೊರಗೆ ಸರ್ಕಾರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪ್ರತಿಭಟನೆ ತೀವ್ರ ಸ್ವರೂಪವೇ ಪಡೆದಿತ್ತು. ಅದ್ಯಾವ ಮಟ್ಟಿಗೆ ಅಂದ್ರೆ. ತುಮಕೂರು ಮುಖ್ಯ ರಸ್ತೆಯೇ ಮಧ್ಯೆಯೇ ಟ್ರ್ಯಾಕ್ಟರ್ ನಲ್ಲಿ ಮಣ್ಣು ತಂದು ಹಾಕಿ ಸರ್ಕಾರದ ವಿರುದ್ಧ ನೂರಾರು ರೈತರು ಆಕ್ರೋಶ ಹೊರಹಾಕಿದ್ರು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಜಿಲ್ಲಾಡಳಿತ ಕಾಮಗಾರಿಯನ್ನ ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ. ಬಳಿಕ ರೈತರು, ಬಿಜೆಪಿ ನಾಯಕರು ಪ್ರತಿಭಟನೆ ಕೈ ಬಿಟ್ಟಿದ್ದಾರೆ. ಅಲ್ಲದೇ ತಾತ್ಕಾಲಿಕ ಮಾತ್ರವಲ್ಲ ಸಂಪೂರ್ಣವಾಗಿ ಇದು ನಿಲ್ಲಬೇಕು. ಇಲ್ಲದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನೀರಾವರಿ ಹೋರಾಟಕ್ಕೆ ಕಾರಣವೇನು?

ಈ ಯೋಜನೆಗೆ ತುಮಕೂರು ಜಿಲ್ಲೆಯ ರಾಜಕಾರಣಿಗಳು, ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ಏನಂದ್ರೆ ಗೊರೂರು ಡ್ಯಾಂನಿಂದ ವರ್ಷಕ್ಕೆ 24 TMC ನೀರನ್ನು ತುಮಕೂರು ಜಿಲ್ಲೆಗೆ ಹರಿಸಬೇಕೆಂದು ರಾಜ್ಯ ಸರ್ಕಾರ ನೀರು ಹಂಚಿಕೆ ಮಾಡಿದೆ. ಈಗ ಮಾಗಡಿ ತಾಲ್ಲೂಕಿಗೆ ಪ್ರತ್ಯೇಕವಾಗಿ ಹೊಸದಾಗಿ ನೀರು ಹಂಚಿಕೆ ಮಾಡಿಸಿಕೊಳ್ಳದೇ 0.75 ಟಿಎಂಸಿ ನೀರನ್ನು ಹರಿಸಲು ಪೈಪ್‌ಲೇನ್ ಕಾಮಗಾರಿ ನಡೆಸಲಾಗುತ್ತಿದೆ ಎನ್ನುವುದು ತುಮಕೂರು ಜಿಲ್ಲೆಯ ರಾಜಕಾರಣಿ ಹಾಗೂ ರೈತರ ಆಕ್ಷೇಪ.

ಇದರ ಜೊತೆಗೆ ನೈಸರ್ಗಿಕವಾಗಿ ನಾಲೆಯ ಮೂಲಕವೇ ಕುಣಿಗಲ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗಬಹುದಿತ್ತು. ಇದರ ಬದಲು ಸ್ಟೀಲ್ ಪೈಪ್‌ಗಳನ್ನು ಹಾಕಿ ಮಾಗಡಿಗೆ ಹೇಮಾವತಿ ನೀರು ಹರಿಸಿದರೆ ಕುಣಿಗಲ್ ತಾಲ್ಲೂಕಿಗೆ ನೀರು ಸಿಗದಂತಾಗುತ್ತೆ. ತುಮಕೂರು ಜಿಲ್ಲೆಯ ಉಳಿದ ತಾಲ್ಲೂಕುಗಳಿಗೆ ನೀರು ಕಡಿಮೆಯಾಗುತ್ತೆ ಎಂಬ ಆತಂಕ ತುಮಕೂರು ಜಿಲ್ಲೆಯ ರಾಜಕಾರಣಿಗಳದ್ದು. ತುಮಕೂರು ಜಿಲ್ಲೆಗೆ ವರ್ಷಕ್ಕೆ 24 ಟಿಎಂಸಿ ಹೇಮಾವತಿ ನೀರು ಹಂಚಿಕೆಯಾಗಿದ್ದರೂ, ಇದುವರೆಗೂ ಯಾವ ವರ್ಷವೂ ಕೂಡ 24 ಟಿಎಂಸಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಹರಿದೇ ಇಲ್ಲ. ತುಮಕೂರು ಜಿಲ್ಲೆಯ ಕೆರೆಕಟ್ಟೆಗಳಿಗೆ, ಕುಡಿಯುವ ಉದ್ದೇಶಕ್ಕೆ ಕೃಷಿ ಉದ್ದೇಶಕ್ಕೆ ಹೇಮಾವತಿ ನೀರನ್ನು ಬಳಕೆ ಮಾಡಲಾಗುತ್ತೆ.

ತುಮಕೂರು ನಗರ, ಪಟ್ಟಣಗಳಿಗೂ ಕುಡಿಯುವ ಉದ್ದೇಶಕ್ಕೆ ಹೇಮಾವತಿ ನೀರುನ್ನು ಬಳಕೆ ಮಾಡಲಾಗುತ್ತೆ. ಗೊರೂರು ಡ್ಯಾಂ ನೀರನ್ನು ತುಮಕೂರು ನಗರದ ಬಳಿಯ ಬುಗುಡನಹಳ್ಳಿ ಕೆರೆಗೆ ಹರಿಸಿ, ಅಲ್ಲಿಂದ ಪೈಪ್ ಮೂಲಕ ತುಮಕೂರು ನಗರಕ್ಕೆ ಪೂರೈಸಲಾಗುತ್ತಿದೆ. ಇದೇ ರೀತಿ ಮಧುಗಿರಿ, ಶಿರಾ ಪಟ್ಟಣಗಳಿಗೂ ಕೆರೆಗಳಿಗೆ ನೀರು ತುಂಬಿಸಿ ಹೇಮಾವತಿ ನೀರನ್ನು ಕುಡಿಯಲು ಪೂರೈಸಲಾಗುತ್ತಿದೆ. ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲ್ಲೂಕುಗಳು ಕೂಡ ಹೇಮಾವತಿ ನೀರನ್ನು ಕುಡಿಯುವ ನೀರು, ಕೃಷಿ ಉದ್ದೇಶಕ್ಕೆ ಅವಲಂಬಿಸಿವೆ. ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರಿನ ಮೂಲ ಬಿಟ್ಟರೇ, ಬೇರೆ ನದಿ ನೀರಿನ ಮೂಲಗಳಿಲ್ಲ. ತುಮಕೂರು ಜಿಲ್ಲೆಗೆ ಹೇಮಾವತಿಯ ಜೀವ ನದಿ. ಹೀಗಾಗಿ ತುಮಕೂರು ಜಿಲ್ಲೆಯ ಜನರು, ರಾಜಕಾರಣಿಗಳು ಪ್ರಾಣ ಬಿಟ್ಟೆವು ಹೇಮಾವತಿ ನೀರು ಕೊಡಲ್ಲ ಎಂದು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

TAGGED:Farmers' anger flares up despite Section 144: Why is there opposition to Hemavati Express Link Canal?
Share This Article
Facebook Twitter Copy Link Print
Previous Article Virat Kohli One More To Go ಈ ಮೆಸೇಜ್ ಕೊಹ್ಲಿ ಕಳಿಸಿದ್ದು ಯಾರಿಗೆ?
Next Article EPF Withdrawals via ATM: ಗುಡ್ ನ್ಯೂಸ್! ಇನ್ಮುಂದೆ ATMಗೆ ಹೋಗಿ ಪಿಎಫ್‌ ಹಣ ವಿತ್‌‌ಡ್ರಾ ಮಾಡಬಹುದು!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?