newsics.com
ಬೆಂಗಳೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರಲ್ಲೇ ಗ್ರಾಮಸ್ಥರು ಚಿರತೆಯನ್ನು ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶಿಸಿದೆ.
ಈ ಪ್ರಕರಣದಲ್ಲಿ ಗ್ರಾಮಸ್ಥರಿಗೆ ಚಿರತೆ ತೊಂದರೆ ಕೊಡುತ್ತಿದ್ದರೂ ಚಿರತೆ ಸೆರೆಹಿಡಿಯಲು ವಿಫಲವಾಗಿರುವುದು ಹಾಗೂ ಚಿರತೆ ಹತ್ಯೆ ತಡೆಯುವಲ್ಲಿ ವಿಫಲವಾಗಿದೆ. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ಆದೇಶಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಆದರೆ ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮೂವರು ರೈತರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇದರಿಂದ ಕಮದಾಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳಿಂದ ಸಾವಿರಾರು ಜನರು ಚಿರತೆ ಹಿಡಿಯಲು ಬೆಟ್ಟ ಹತ್ತಿದ್ದಾರೆ.
ಬೆಟ್ಟದಲ್ಲಿ ಚಿರತೆ ಕಾಣಿಸುತ್ತಿದ್ದಂತೆ ಅಕ್ರೋಶಗೊಂಡ ಗ್ರಾಮಸ್ಥರು ಕಲ್ಲು ಬಡಿಗೆಗಳನ್ನು ಹಿಡಿದು ಏಕಕಾಲಕ್ಕೆ ಚಿರತೆ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾರೆ. ಅರಣ್ಯ ಸಿಬ್ಬಂದಿ, ಪೊಲೀಸರ ಮುಂದೆಯೇ ಚಿರತೆ ಮೇಲೆ ದಾಳಿ ನಡೆಸಿ ಹೊಡೆದು ಕೊಂದಿದ್ದಾರೆ. ಬಳಿಕ ಪಶು ಆಂಬುಲೆನ್ಸ್‌ಗೆ ಎಸೆದಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ
ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ