newsics.com
ಬೆಂಗಳೂರು: ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ ಮುಂದೆ ನಿಂತಿದ್ದ ಹುಡುಗಿಯರ ಎದುರು ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿರುವ ಅಸಹ್ಯಕರ ಘಟನೆ ನಡೆದಿದೆ.
ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ಪ್ಯಾಂಟ್ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ಬೆಂಗಳೂರು ಪೊಲೀಸರಿಗೆ ವಿಡಿಯೋವನ್ನು ಟ್ಯಾಗ್ ಮಾಡಿ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
ಈ ವಿಡಿಯೋಗೆ ಕಮೆಂಟ್ ಮಾಡಿರುವ ನೆಟ್ಟಿಗರು, ಇದು ನಾಚಿಕೆಗೇಡಿನ ಸಂಗತಿ. ಆತನನ್ನು ಆದಷ್ಟು ಬೇಗ ಬಂಧಿಸಬೇಕು. ಆತನ ಗಾಡಿಯ ಸಂಖ್ಯೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಉದ್ದೇಶಪೂರ್ವಕವಾಗಿ ಆರಂಭದ ಎರಡು ನಂಬರ್ ಅನ್ನು ಮುಚ್ಚಿದ್ದಾನೆ ಎಂದು ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದಾರೆ.
https://www.instagram.com/reel/C9JVMufSDMU/?utm_source=ig_web_button_share_sheet
ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್