newsics.com
ಚಂಡೀಗಢ: ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ ಎಂಬ ಜಾಹೀರಾತು ಕೆಲ ತಿಂಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಜಾಹೀರಾತಿನ ಅಸಲಿಯತ್ತು ಈಗ ಬಹಿರಂಗವಾಗಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಸಂಪಾದಿಸಿ ಎಂಬ ಜಾಹೀರಾತು ಬೆನ್ನತ್ತಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ತನಿಖೆ ವೇಳೆ ನಿರುದ್ಯೋಗಿಗಳನ್ನು ಮೋಸ ಮಾಡುವ ಉದ್ದೇಶದಿಂದಲೇ ಈ ಜಾಹೀರಾತು ಪ್ರಕಟಿಸಲಾಗಿತ್ತು ಎಂದು ತಿಳಿದು ಬಂದಿದೆ.
ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಜಾಜ್ ಮತ್ತು ಇರ್ಷಾದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡುವ ಜಾಹೀರಾತು ಇದಾಗಿತ್ತು. ಆರೋಪಿಗಳು ಮಹಿಳೆಯರ ನಕಲಿ ಫೋಟೋಗಳನ್ನು ಜಾಹೀರಾತಿಗೆ ಬಳಸಿಕೊಂಡಿದ್ದರು. ಪೊಲೀಸ್ ತನಿಖೆಯಲ್ಲಿ ಆರೋಪಿಗಳು ಸೋಶಿಯಲ್ ಮೀಡಿಯಾದಲ್ಲಿ ನಾಲ್ಕು ನಕಲಿ ಖಾತೆಗಳನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.
ಜಾಹೀರಾತು ನೋಡಿ ತಮ್ಮನ್ನು ಸಂಪರ್ಕಿಸುವ ಯುವಕರಿಗೆ ನೋಂದಣಿ ಮಾಡಿಕೊಳ್ಳಲು ಶುಲ್ಕ ತುಂಬುವಂತೆ ಹೇಳುತ್ತಿದ್ದರು.
ಫೀಸ್ ತುಂಬಿ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗುತ್ತಿತ್ತು. ನಕಲಿ ಫೇಸ್‌ಬುಕ್ ಖಾತೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿತ್ತು.
ಸದ್ಯ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು
ಕಾಲೇಜು ಬಳಿ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್