newsics.com
ಮುಂಬೈ: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
2024ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಕ್ಲಾಸೆನ್, ಇದೀಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವ ಸಾಧ್ಯತೆಯಿದೆ.
ಬಲಗೈ ಬ್ಯಾಟರ್ ಕ್ಲಾಸೆನ್ 2018ರಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆದ್ರೆ ಕುಟುಂಬದ ಜೊತೆಗೆ ಸಮಯ ಕಳೆಯುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇದೊಂದು ಅತಿ ಕಷ್ಟದ ನಿರ್ಣಯವಾಗಿದ್ದು, ಬಹಳಷ್ಟು ಯೋಚನೆ ಮಾಡಿದ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಹೆನ್ರಿಕ್ ಕ್ಲಾಸೆನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ ಕೊನೆಯ ಐಪಿಎಲ್ ಪಂದ್ಯದಲ್ಲಿ ಸ್ಫೋಟಕ ಇನಿಂಗ್ಸ್ ಕಟ್ಟಿದ್ದರು. ಈ ಪಂದ್ಯದಲ್ಲಿ ಕ್ಲಾಸೆನ್ ಜಸ್ಟ್ 39 ಎಸೆತಗಳಲ್ಲಿ 105 ರನ್ ಸಿಡಿಸಿದ್ದರು. ಈ ಸ್ಫೋಟಕ ಇನಿಂಗ್ಸ್‌ನಲ್ಲಿ ಏಳು ಬೌಂಡರಿ, ಒಂಬತ್ತು ಸಿಕ್ಸರ್‌ಗಳು ಸೇರಿವೆ. ಇವರಿಗೆ ಎಸ್‌ಆರ್‌ಎಚ್ 23 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಂಡಿತ್ತು